ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸಮಸ್ಯೆ ಪರಿಹಾರಕ್ಕೆ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸಮಸ್ಯೆ ಪರಿಹಾರಕ್ಕೆ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸಮಸ್ಯೆ ಪರಿಹಾರಕ್ಕೆ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ 

ಬೆಂಗಳೂರು: ರಾಜ್ಯದ ಸುಮಾರು 20 ಸಾವಿರ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸಹಜವಾಗಿ ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಿದ ಬಳಿಕ ಘಟಕಗಳ ನಿರ್ವಹಣೆ, ವಿದ್ಯುತ್ ಶುಲ್ಕ, ಮತ್ತು ಕಚ್ಚಾ ನೀರಿನ ಕೊರತೆಯಂತಹ ಹಲವು ಸಮಸ್ಯೆಗಳು ಉಂಟಾಗಿವೆ. ಈ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈಗಾಗಲೇ ಸರ್ಕಾರ ಯಾವುದೇ ಹೊಸ ಘಟಕವನ್ನು ಮಂಜೂರು ಮಾಡಿಲ್ಲ.

"ಸ್ವಲ್ಪ ದಿನ ತಾಳ್ಮೆ ವಹಿಸಿ, ನಮ್ಮ ಸರ್ಕಾರಕ್ಕೆ ಸಮಯ ನೀಡಿದರೆ ಶೀಘ್ರದಲ್ಲೇ ಸೂಕ್ತ ಪರಿಹಾರ ಒದಗಿಸಲಾಗುವುದು," ಎಂದು ಸಚಿವರು ಸದನದಲ್ಲಿ ಭರವಸೆ ನೀಡಿದರು.