ಕಲ್ಯಾಣ ಕರ್ನಾಟಕ ಶೈಕ್ಷಣಿಕ ಪ್ರಗತಿಗೆ ವಿಕಾಸಸೌಧದಲ್ಲಿ ಚರ್ಚೆ

ಕಲ್ಯಾಣ ಕರ್ನಾಟಕ ಶೈಕ್ಷಣಿಕ ಪ್ರಗತಿಗೆ ವಿಕಾಸಸೌಧದಲ್ಲಿ ಚರ್ಚೆ
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿ ಮತ್ತು ಅಭಿವೃದ್ಧಿಗೆ ಸಂಬಂಧಿಸಿ ವಿಕಾಸಸೌಧದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಸಚಿವ ಶರಣಪ್ರಕಾಶ ಪಾಟೀಲ, ಕರ್ನಾಟಕ ಸರ್ಕಾರ, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರು, ಆಳಂದ ಶಾಸಕರು ಬಿ.ಆರ್. ಪಾಟೀಲ, ಸಚಿವ ಶರಣಬಸಪ್ಪ ದರ್ಶನಾಪುರ, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರ ಗಣ್ಯರು ಭಾಗವಹಿಸಿದ್ದರು.
ಶೈಕ್ಷಣಿಕ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಅಧಿಕಾರಿ ಸಂಪನ್ಮೂಲ ಮೌಲ್ಯಮಾಪನ ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕಲ್ಯಾಣ ಕರ್ನಾಟಕದ ಶಾಲಾ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಪೂರಕ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
- ಕಲಬುರಗಿ ವರದಿ
-