SSLC ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿಯ ಪರಿಶೀಲನೆ

SSLC ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿಯ ಪರಿಶೀಲನೆ
ಕಲಬುರಗಿ: ಇಂದಿನಿಂದ ಪ್ರಾರಂಭವಾದ SSLC ಪರೀಕ್ಷೆಗಳ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಪೌಜಿಯಾ ಬಿ. ತರನಮ್ಮ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.
ಅವರು ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರದ ಕೊಠಡಿ ವ್ಯವಸ್ಥೆ, ಆಸನ ನಿಯೋಜನೆ ಮತ್ತು ಪರೀಕ್ಷಾ ನಿರ್ವಹಣೆಯ ವ್ಯವಸ್ಥೆಯನ್ನು ಪರಿಶೀಲಿಸಿದರು. ಪರೀಕ್ಷೆಗಳು ಸರಾಗವಾಗಿ ನಡೆಯಲು ಮಾಡಲಾದ ಸಿದ್ಧತೆಗಳ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಜಿಲ್ಲಾಧಿಕಾರಿಯವರ ಈ ಪರಿಶೀಲನೆಯಿಂದ ವಿದ್ಯಾರ್ಥಿಗಳು ಮತ್ತು ಅಧೀಕ್ಷಕರಿಗೆ ಉತ್ಸಾಹ ಮತ್ತು ಆತ್ಮವಿಶ್ವಾಸ ತುಂಬಿದಂತಾಯಿತು.
ಕೆಕೆನಿ