ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಉಚಿತ ಆರೋಗ್ಯ ತಪಾಸಣಾ ಶಿಬಿರ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಉಚಿತ ಆರೋಗ್ಯ ತಪಾಸಣಾ ಶಿಬಿರ
ಕಲಬುರಗಿ: ನಗರದ ಕ್ರೇಡಲ್ ಸ್ತ್ರೀರೋಗ ಪ್ರಸೂತಿ ಮತ್ತು ಮಕ್ಕಳ ಆಸ್ಪತ್ರೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಉಪನಿರ್ದೇಶಕರ ಕಚೇರಿ ಶಿಕ್ಷಣಾಧಿಕಾರಿ ಶಂಕ್ರಮ್ಮ ಡವಳಗಿ ಶಿಬಿರವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಉಪಾಧ್ಯಕ್ಷೆ ರೇಣುಕಾ ಡಾಂಗೆ, ಕರ್ನಾಟಕ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಸೇವಂತ ಚವ್ಹಾಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಪಾಟೀಲ್, ಸ್ತ್ರೀರೋಗ ಪ್ರಸೂತಿ ತಜ್ಞೆ ಡಾ. ಸ್ವಪ್ನ ಆರ್.ಎಸ್, ಮಕ್ಕಳ ತಜ್ಞರಾದ ಡಾ. ರಾಜಶೇಖರ್ ಸುಲೇಪೇಟಕರ್, ಶಶಿಕಲಾ ಸುಲೇಪೇಟಕರ್, ಶೀತಲ್ ಜಾದವ, ನಳಿನಿ ಮಹಾಗವಕರ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.
ನಂತರ ಮಹಿಳಾ ಶಿಕ್ಷಕಿಯರನ್ನು ಸನ್ಮಾನಿಸಿ ಗೌರವಿಸಲಾಯಿತು.