ಯುವ ಕಾಂಗ್ರೆಸ್ ವತಿಯಿಂದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರಗೆ ಸನ್ಮಾನ

ಯುವ ಕಾಂಗ್ರೆಸ್ ವತಿಯಿಂದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರಗೆ ಸನ್ಮಾನ

ಯುವ ಕಾಂಗ್ರೆಸ್ ವತಿಯಿಂದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರಗೆ ಸನ್ಮಾನ

ಕಲಬುರಗಿ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರನ್ನು ನಗರದ ಯುವ ಕಾಂಗ್ರೆಸ್ ದಕ್ಷಿಣ ಅಧ್ಯಕ್ಷ ಟೈಗರ್ ವಿಘ್ನೇಶ್ವರ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶಕೀಲ ಸರಡಗಿ, ಕಾರ್ತಿಕ್ ನಾಟೇಕರ್, ಸಂಗಪಾಲ್ ಕಾಂಬಳೆ, ದೇವು, ಸೈ ಪೋದಿನ್ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು. ಸಚಿವರಿಗೆ ಗೌರವ ಸಲ್ಲಿಸಿದ ನಂತರ, ಪಕ್ಷದ ಧ್ಯೇಯೋದ್ದೇಶಗಳು ಮತ್ತು ಜನಸಾಮಾನ್ಯರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು.

ಸಚಿವ ಆರ್.ಬಿ. ತಿಮ್ಮಾಪುರ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರದ ಯೋಜನೆಗಳು ಮತ್ತು ಮುಂದಿನ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು. ಜನಸಾಮಾನ್ಯರ ಸಹಕಾರದೊಂದಿಗೆ ಯೋಜನೆಗಳನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಉತ್ಸಾಹದಿಂದ ಕಾರ್ಯಕ್ರಮ ಯಶಸ್ವಿಗೊಳಿಸಿದರು.