ಕೇಂದ್ರ ಸರ್ಕಾರದಿಂದ ಡಾ ಬಿ ಆರ್ ಅಂಬೇಡ್ಕರ್ ರವರ ಜಯಂತಿಯಂದು ಸಾರ್ವತ್ರಿಕ ರಜೆ ಘೋಷಣೆ* : ಡಾ ಅಂಬಾರಾಯ ಅಷ್ಠಗಿ ಶ್ಲಾಘನೀಯ

ಕೇಂದ್ರ ಸರ್ಕಾರದಿಂದ ಡಾ ಬಿ ಆರ್ ಅಂಬೇಡ್ಕರ್ ರವರ ಜಯಂತಿಯಂದು ಸಾರ್ವತ್ರಿಕ ರಜೆ ಘೋಷಣೆ* : ಡಾ ಅಂಬಾರಾಯ ಅಷ್ಠಗಿ ಶ್ಲಾಘನೀಯ
ಭಾರತದ ಸಂವಿಧಾನ ಶಿಲ್ಪಿ, ಮಹಾನ್ ಸಮಾಜ ಸುಧಾರಕರಾದ ಡಾ. ಬಿ. ಆರ್. ಅಂಬೇಡ್ಕರ್ ಅವರ ಜನ್ಮ ದಿನದಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ರಜೆಯನ್ನು ಘೋಷಿಸಿದ ತೀರ್ಮಾನ ಅತ್ಯಂತ ಶ್ಲಾಘನೀಯವಾಗಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ ಅಂಬಾರಾಯ ಅಷ್ಠಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ತೀರ್ಮಾನವು ಡಾ ಬಿ ಆರ್ ಅಂಬೇಡ್ಕರ್ ಅವರ ತತ್ವಗಳು, ಆದರ್ಶಗಳು ಮತ್ತು ಸಮಾನತೆಯ ಸಂದೇಶವನ್ನು ಮತ್ತಷ್ಟು ಬಲಪಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಅಷ್ಠಗಿ ತಿಳಿಸಿದ್ದಾರೆ.