ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಳವಾರದಲ್ಲಿ ಅದ್ದೂರಿಯಾಗಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುಗೆ ಸಮಾರಂಭ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಳವಾರದಲ್ಲಿ ಅದ್ದೂರಿಯಾಗಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುಗೆ ಸಮಾರಂಭ
ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಎಂಟನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಸ್ತುತಪಡಿಸಲ್ಪಟ್ಟವು.
ಕಾರ್ಯಕ್ರಮದಲ್ಲಿ ಬಿಳವಾರ CRP ಮಡಿವಾಳಪ್ಪ ನಗನೂರು, ಆಲೂರು ಕ್ಲಸ್ಟರ್ CRP ಶಾಂತು ಹಚ್ಚಡ್, ಶಾಲೆಯ SDMC ಅಧ್ಯಕ್ಷ ಕರಬಸಯ್ಯ ಹಿರೇಮಠ, SDMC ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಪಾಲ್ಗೊಂಡರು. ಗ್ರಾಮ ಪಂಚಾಯತ್ ಅಧ್ಯಕ್ಷ ಗೊಲ್ಲಾಳಪ್ಪ ಮ್ಯಾಗೇರಿ, ಉಪಾಧ್ಯಕ್ಷ ಲಾಡ್ಲೆ ಪಟೇಲ, ಮುಖ್ಯಗುರು ಸೈದಪ್ಪ ಕ.ನೌ., ಸಂಘದ ಸದಸ್ಯ ಭೀಮರಾಯ, ಶಿಕ್ಷಕರಾದ ಬಸವಂತರಾಯ ಪಾಟೀಲ್, ರವೀಂದ್ರ ಕೋಬಾಳ್, ರಾಜು, ಶಿಕ್ಷಕಿಯರಾದ ಪರ್ಜನಾ, ಶಿಲ್ಪಾಶ್ರೀ, ಮಂಜುಳಾ, ವಿಜಯಲಕ್ಷ್ಮಿ, ಸುಧಾಶ್ರೀ ಮತ್ತು ಊರಿನ ಶಿಕ್ಷಣ ಪ್ರೇಮಿಗಳು ಉಪಸ್ಥಿತರಿದ್ದರು.
ಮುದ್ದು ಮಕ್ಕಳ ಕಲಾತ್ಮಕ ಮತ್ತು ಸಾಂಸ್ಕೃತಿಕ ಪ್ರತಿಭೆಗಳ ಪ್ರದರ್ಶನ ಈ ಸಮಾರಂಭದ ಪ್ರಮುಖ ಆಕರ್ಷಣೆಯಾಗಿತ್ತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳನ್ನು ಶ್ಲಾಘಿಸಿ, ಭವಿಷ್ಯದ ಶಿಕ್ಷಣಯಾತ್ರೆಯಲ್ಲಿ ಯಶಸ್ಸು ಕೋರಲಾಯಿತು. ಈ ಸಂಧರ್ಭದಲ್ಲಿ ಶಿಕ್ಷಕರು ಮತ್ತು ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಶುಭಾಶಯ ಸಲ್ಲಿಸಿದರು.
ಸಂಯೋಜಿತ ಮತ್ತು ಸೌಹಾರ್ದಪೂರ್ಣವಾಗಿ ನಡೆದ ಈ ಕಾರ್ಯಕ್ರಮವು, ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ಮತ್ತು ಪ್ರೇರಣೆಯನ್ನು ಹುಟ್ಟುಹಾಕಲು ಸಹಾಯ ಮಾಡಿತು.
- ವರದಿ: ಜೆಟ್ಟಪ್ಪ ಎಸ್. ಪೂಜಾರಿ