ವೀರೇಂದ್ರ ಹೆಗ್ಗಡೆ ರವರ ಸೇವೆ ಸರ್ವರಿಗೂ ಮಾದರಿ:ಸಂತೋಷ್ ಪಾಟೀಲ್

ವೀರೇಂದ್ರ ಹೆಗ್ಗಡೆ ರವರ ಸೇವೆ ಸರ್ವರಿಗೂ ಮಾದರಿ:ಸಂತೋಷ್ ಪಾಟೀಲ್
ಚಿಟಗುಪ್ಪ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಕಾರ್ಯಗಳು ಜನಪ್ರಸಿದ್ಧಿ ಪಡೆದಿವೆ. ಶ್ರೀ ವೀರೇಂದ್ರ ಹೆಗ್ಗಡೆ ರವರ ಸಾಮಾಜಿಕ ಕಳಕಳಿಯ ಫಲಶ್ರುತಿಯಿಂದ ನಾಡಿನ ತುಂಬೆಲ್ಲ ಅಭಿವೃದ್ಧಿಯ ಕಾರ್ಯಗಳು ಸಮರೂಪಾದಿಯಲ್ಲಿ ಸಾಗುತ್ತಿವೆ. ಹಾಗಾಗಿ ವೀರೇಂದ್ರ ಹೆಗಡೆಯವರ ಸೇವೆ ಸರ್ವರಿಗೂ ಮಾದರಿಯಾಗಿದೆ ಎಂದು ಬಿಜೆಪಿ ಮುಖಂಡರಾದ ಸಂತೋಷ್ ಪಾಟೀಲ್ ನುಡಿದರು.
ನಗರದ ಬನಶಂಕರಿ ದೇವಸ್ಥಾನದ ಸಮುದಾಯ ಭವನ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 1.00 ಲಕ್ಷ ರೂ. ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು ರಾಜ್ಯದ ಪ್ರತಿಯೊಂದು ಗ್ರಾಮಗಳಲ್ಲಿಯೂ ದೇವಸ್ಥಾನ ಜೀರ್ಣೋದ್ಧಾರ, ಸಮುದಾಯ ಭವನ ನಿರ್ಮಾಣ, ಹಾಲಿನ ಡೈರಿ ಕಟ್ಟಡ ರಚನೆ ಮುಂತಾದವುಗಳಿಗೆ ಅನುದಾನ ಒದಗಿಸುವ ಮೂಲಕ ಗ್ರಾಮಗಳ ಕಲ್ಯಾಣಕ್ಕಾಗಿ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ಕಾರ್ಯ ಶ್ಲಾಘನೀಯವಾದುದು ಎಂದರು.
ತಾಲೂಕಿನ ಯೋಜನಾಧಿಕಾರಿಗಳಾದ ಬಸವರಾಜ ರವರು ಮಾತನಾಡಿ ಆರ್.ಬಿ.ಐ ನಿಯಮದ ಪ್ರಕಾರ ರಾಷ್ಟ್ರೀಕೃತ ಬ್ಯಾಂಕುಗಳ ಬಿ.ಸಿ.ಪ್ರತಿನಿಧಿಯಾಗಿ ಸ್ವ ಸಹಾಯ ಸಂಘದ ಸದಸ್ಯರುಗಳಿಗೆ ಬ್ಯಾಂಕಿನ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸುತ್ತಿದೆ.
ಪೂಜ್ಯ ಖಾವಂದರು ರಾಜ್ಯದ ಉದ್ದಗಲಕ್ಕೂ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಹಾಲಿನ ಡೈರಿ ಕಟ್ಟಡ ರಚನೆಗೆ ಅನುದಾನ,ದೇವಸ್ಥಾನ ಜೀರ್ಣೋದ್ಧಾರಕ್ಕೆ ಅನುದಾನ,ಸಮುದಾಯ ಭವನ ನಿರ್ಮಾಣಕ್ಕಾಗಿ ಅನುದಾನ, ಶಾಲಾ ಕಟ್ಟಡ ರಚನೆಗೆ ಅನುದಾನ,ಜ್ಞಾನದೀಪ ಶಿಕ್ಷಕರ ಒದಗಣೆ,ಸುಜ್ಞಾನನಿಧಿ ಶಿಷ್ಯ ವೇತನ ವಿತರಣೆ,ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೈದ್ಯಕೀಯ ಸಲಕರಣೆಗಳ ವಿತರಣೆ ಮಾಡುವ ಮುಖಾಂತರ ಸಮಾಜಮುಖಿ ಸೇವೆಯನ್ನು ಸಲ್ಲಿಸುತ್ತಿದ್ದು, ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜನಜಾಗೃತಿ ವೇದಿಕೆಯ ಜಿಲ್ಲಾ ಸದಸ್ಯರಾದ ಸಂಗಮೇಶ ಎನ್ ಜವಾದಿ ಸರ್ ರವರು ಮಾತನಾಡಿ ಸಂಸ್ಥೆಯಲ್ಲಿ ಹಲವಾರು ಒಳ್ಳೆಯ ಸಮಾಜ ಕಾರ್ಯಗಳು ಸುಸೂತ್ರವಾಗಿ ಜರುಗುತ್ತಿವೆ. ಅದರಲ್ಲಿ ದೇವಸ್ಥಾನ ಜೀರ್ಣೋದಾರ ಕಾರ್ಯ ಸಹ ಒಂದಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ವತಿಯಿಂದ ಕ್ಷೇತ್ರದ ಧರ್ಮಸ್ಥಳದ ಪೂಜ್ಯನೀಯ ಡಾ.ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ಒಂದು ಲಕ್ಷ ಮೊತ್ತವನ್ನು ಬೇರೆ ಯಾವುದೇ ಕೆಲಸಗಳಿಗೆ ಬಳಸದೆ ದೇವಸ್ಥಾನ ಸಮುದಾಯ ಭವನದ ಅಭಿವೃದ್ಧಿಗೆ ಮಾತ್ರ ಬಳಸಬೇಕು ಎಂದು ತಿಳಿಸಿದರು.
ವೇದಿಕೆಯ ಜಿಲ್ಲಾ ಸದಸ್ಯರಾದ ಮೊಹಮ್ಮದ್
ಅಸ್ಲಾಂಮಿಯಾ ರವರು ಮಾತನಾಡಿ ಬಡವರಿಗೆ ಅನುಕೂಲ ಆಗಲಿ ಎಂದು ಬ್ಯಾಂಕ್ ಜೊತೆ ಒಪ್ಪಂದ ಮಾಡಿಕೊಂಡು ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತಿದ್ದು. ಇಂತಹ ಹತ್ತು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿಕೊಟ್ಟಿರುವ ಪೂಜ್ಯ ಡಾಕ್ಟರ್ ವೀರೇಂದ್ರ ಹೆಗಡೆ ಜಿ ಅವರಿಗೆ ನಮ್ಮೆಲ್ಲರ ಪರವಾಗಿ ಧನ್ಯವಾದಗಳು ತಿಳಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ, ಜನಜಾಗೃತಿ ವೇದಿಕೆಯ ಸದಸ್ಯ ಶ್ಯಾಮರಾವ, ರೇವಣಪ್ಪ ಹೂಗಾರ,ಮನೋಹರ ಶೀರಮುಂಡಿ , ದೇವಸ್ಥಾನದ ಪದಾಧಿಕಾರಿಗಳು, ಸ್ವಸಹಾಯ ಸಂಘದ ಮಹಿಳಾ ಸದಸ್ಯರು , ಸೇವಾ ಪ್ರತಿನಿಧಿಗಳು, ತಾಲೂಕಿನ ಕೃಷಿ ಮೇಲ್ವಿಚಾರಕರು ಉಪಸ್ಥಿತರಿದ್ದರು.ಸಿದ್ದು ಪೂಜಾರಿ ನಿರೂಪಿಸಿ, ವಂದಿಸಿದರು.
ವರದಿ - ಸಂಗಮೇಶ ಎನ್ ಜವಾದಿ.