ಬಳಬಟ್ಟಿ ಗ್ರಾಮ: ಮೇ ತಿಂಗಳಲ್ಲಿ ಶ್ರೀ ಹಣಮಂತ ಮುತ್ಯ ದೇವಸ್ಥಾನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಯಕ್ರಮ

ಸಾಧಕರನ್ನು ಗೌರವಿಸುವ ಸಾಧಕರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಬಳಬಟ್ಟಿ ಗ್ರಾಮ: ಮೇ ತಿಂಗಳಲ್ಲಿ ಶ್ರೀ ಹಣಮಂತ ಮುತ್ಯ ದೇವಸ್ಥಾನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಯಕ್ರಮ
ಯಡ್ರಾಮಿ ತಾಲ್ಲೂಕಿನ ಬಳಬಟ್ಟಿ ಗ್ರಾಮದ ಶ್ರೀ ಹಣಮಂತ ಮುತ್ಯ ದೇವಸ್ಥಾನ ಮಂಡಳಿಯ ಚಾರಿಟೇಬಲ್ ಟ್ರಸ್ಟ್ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಮೇ ತಿಂಗಳಲ್ಲಿ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೈದ ಸಾಧಕರಿಗೆ ‘ಸಾಧಕರತ್ನ ಪ್ರಶಸ್ತಿ’ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.
ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರಮಿಸಿದ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು.
ಈ ಕುರಿತು ಮಾಹಿತಿ ನೀಡಿದ ಟ್ರಸ್ಟ್ ಅಧ್ಯಕ್ಷರು ಹಾಗೂ ರಾಷ್ಟ್ರೀಯ ಅಹಿಂದ ಸಂಘಟನೆಯ ಕಲಬುರಗಿ ಜಿಲ್ಲಾ ಅಧ್ಯಕ್ಷರಾದ ಶಿವಶಂಕರ್ ಗುಂಡುಗುರ್ತಿ ಅವರು, “ಈ ಕಾರ್ಯಕ್ರಮದಿಂದ ಗ್ರಾಮದ ಪ್ರಗತಿಗೆ ಪ್ರೇರಣೆ ಸಿಗಲಿದೆ. ಯುವಜನತೆಯಲ್ಲಿನ ಪ್ರತಿಭೆಗೆ ಸನ್ನೆ ಹಾಕಿ, ಸಮಾಜದಲ್ಲಿ ಉತ್ತಮ ಸೇವೆ ಮಾಡಲು ಪ್ರೇರಣೆಯಾಗಲಿದೆ,” ಎಂದು ತಿಳಿಸಿದ್ದಾರೆ.