ಡಾ. ಬಾಬು ಜಗಜೀವನ್ ರಾಮ್ ಜಯಂತ್ಯುತ್ಸವ: ವಾಡಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ಭಾವಪೂರ್ಣ ನಮನ

ಡಾ. ಬಾಬು ಜಗಜೀವನ್ ರಾಮ್ ಜಯಂತ್ಯುತ್ಸವ: ವಾಡಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ಭಾವಪೂರ್ಣ ನಮನ

ಡಾ. ಬಾಬು ಜಗಜೀವನ್ ರಾಮ್ ಜಯಂತ್ಯುತ್ಸವ: ವಾಡಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ಭಾವಪೂರ್ಣ ನಮನ

ವಾಡಿಯಲ್ಲಿ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ರಾಷ್ಟ್ರ ಮಹಾನ ನಾಯಕರಾದ ಡಾ ಬಾಬು ಜಗಜೀವನ್ ರಾಮ್ ಅವರ 118ನೇ ಜಯಂತಿ ಪ್ರಯುಕ್ತ ಭಾವಚಿತ್ರಕ್ಕೆ ಬಿಜೆಪಿ ಮುಖಂಡರು ಗೌರವ ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ಬಿಜೆಪಿ ತಾಲ್ಲೂಕು ಎಸ್ ಸಿ ಮೂರ್ಚಾದ ಮಾಜಿ ಅಧ್ಯಕ್ಷರಾದ ರಾಜು ಮುಕ್ಕಣ್ಣ ಅವರು ಮಾತನಾಡಿ ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು ಎಂದರು.

ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು ಎಂದರು.

ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಗೆ ಭಾರತವನ್ನು ಸೇರಿಸುವಲ್ಲಿ ಡಾ ಬಾಬು ಜಗಜೀವನ ರಾಮ್ ಅವರ ಪಾತ್ರ ಮಹತ್ವದ್ದಾಗಿದೆ. ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಅಲ್ಲದೇ ಇನ್ನೂ ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ ಎಂದು ಹೇಳಿದರು.

ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ,ಯುವ ಮುಖಂಡ ವಿಠಲ ವಾಲ್ಮೀಕ ನಾಯಕ, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ರವಿ ನಾಯಕ,ಎಸ್ ಸಿ ಮೂರ್ಚಾದ ಅಧ್ಯಕ್ಷ ದೌಲತರಾವ ಚಿತ್ತಾಪುರಕರ,ಮುಖಂಡರಾದ ಶರಣಗೌಡ ಚಾಮನೂರ,ನಾರಾಯಣ ರಾಠೊಡ,ಪಾಲ್ಗುಣ ಹಲಕರ್ಟಿ,ಚಂದ್ರಶೇಖರ ಬೆಣ್ಣೂರ,ಶಿವಶರಣಪ್ಪ ತೆಲಗೇರಿ,ದಂಡಪ್ಪ ಪೂಜಾರಿ,

ಶ್ರೀಕಾಂತ್ ತೆಲಗೇರಿ,ತಿಪ್ಪಣ್ಣ ಲಡ್ಲಾಪುರ,ಇಸ್ಮಾಯಿಲ ರಾವೂರ ಸೇರಿದಂತೆ ಇತರರು ಇದ್ದರು.