ಶಿಕ್ಷಣ ಜೋತೆ ಸ್ವಯಂ ಉದ್ಯೋಗದ ಕೌಶಲ್ಯ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ- ಶ್ರೀ ರಾಜಾ ಭಿ ಭೀಮಳ್ಳಿ

ಶಿಕ್ಷಣ ಜೋತೆ ಸ್ವಯಂ ಉದ್ಯೋಗದ ಕೌಶಲ್ಯ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ- ಶ್ರೀ ರಾಜಾ ಭಿ ಭೀಮಳ್ಳಿ

ಶಿಕ್ಷಣ ಜೋತೆ ಸ್ವಯಂ ಉದ್ಯೋಗದ ಕೌಶಲ್ಯ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ- ಶ್ರೀ ರಾಜಾ ಭಿ ಭೀಮಳ್ಳಿ

ಕಲಬುರಗಿ: ಇಂದು ಪ್ರತಿಯೋಬ್ಬರಿಗೂ ಒಳ್ಳೆಯ ಶಿಕ್ಷಣ ಸಿಗುತ್ತಿದೆ.ಆದರೆ ಉದ್ಯೋಗ ಸಿಗುವದು ಗಗನಕುಸುಮವಾಗಿದೆ.ವಿದ್ಯಾರ್ಥಿಗಳು ಶಿಕ್ಷಣವನ್ನು ಜ್ಞಾನಕ್ಕೆ ಬಳಸಿಕೊಂಡು ಅದರ ಜೋತೆ ಅತ್ಯುತ್ತಮ ಕೌಶಲ್ಯ ಬೆಳೆಸಿಕೊಂಡು ಸ್ವಯಂ ಉದ್ಯೋಗದತ್ತ ಗಮನ ಹರಿಸಬೇಕೆಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ರಾಜಾ ಭಿ ಭೀಮಳ್ಳಿ ಯವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸೀರಿ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯು ವಿಧ್ಯಾರ್ಥಿಗಳಿಗೆ ಸಂಸ್ಕಾರ ನೀಡುವ ಜೋತೆ ಜೀವನಕ್ಕೆ ಬೇಕಾದ ಒಳ್ಳೆಯ ಕೌಶಲ್ಯಗಳನ್ನು ಕಲಿಸುತ್ತದೆ. ಇಂತಹ ಕೌಶಲ್ಯಗಳನ್ನು ವಿಧ್ಯಾರ್ಥಿಗಳು ಜೀವನದಲ್ಲಿ ಸದಾ ಅಳವಡಿಸಿಕೊಂಡು ದೇಶದ ಅತ್ಯುತ್ತಮ ನಾಗರಿಕ ರಾಗಬೇಕು ಎಂದು ಹೇಳಿದರು. ಇಂದು ನಾವು ಉದ್ಯೋಗಕ್ಕಾಗಿ ಸರ್ಕಾರದ ಮೇಲೆ ಅವಲಂಬಿರಾಗಿರದೆ ನಾವೆ ಸ್ವಂತ ಉದ್ಯೋಗ ಮಾಡಿ ಸರ್ಕಾರ ಹಾಗೂ ಹೆತ್ತ ತಂದೆ ತಾಯಿ ಹಾಗೂ ಭಾರತಮಾತೆಯ ಋಣ ತೀರಿಸಲು ಪಣತೋಡಲು ಕರೆ ನೀಡಿದರು.

 ಅತಿಥಿಗಳಾಗಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀ ಉದಯಕುಮಾರ್ ಚಿಂಚೋಳಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ತಂಡಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ ರಾಜೇಂದ್ರ ಕೊಂಡಾ ವಹಿಸಿ ಮಾತನಾಡಿದರು. ಏಳು ದಿನಗಳ ಕಾಲ ನಡೆದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ವರದಿ ವಾಚನವನ್ನು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ನೋಡಲ್ ಅಧಿಕಾರಿ ಡಾ ಮಹೇಶ್ ಕುಮಾರ್ ಗಂವ್ಹಾರ ನೆರವೇರಿಸಿದರು.

ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ ವೀಣಾ, ಶ್ರೀಮತಿ ಉಮಾ ರೇವೂರ, ಕಾರ್ಯಕ್ರಮ ಅಧಿಕಾರಿಗಳಾದ ಡಾ ರೇಣುಕಾ ಎಚ್, ಶ್ರೀಮತಿ ಸುಷ್ಮಾ ಕುಲಕರ್ಣಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ ಮೋಹನರಾಜ ಪತ್ತಾರ,ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ ಪ್ರೇಮಚಂದ್ ಚವಾಣ್, ಡಾ ರಾಜೇಶ್ ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಮಾರಿ ರಜನಿ ಮಲಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು