ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ

ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ
ಶಹಾಪುರ : ತಾಲೂಕಿನ ಸಗರ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಇರುವ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಪ್ರಗತಿಪರರು ಆಗ್ರಹಿಸಿದ್ದಾರೆ.ಪ್ರಯಾಣಿಕರು, ವಿದ್ಯಾರ್ಥಿಗಳು,ಮಹಿಳೆಯರು, ವೃದ್ಧರು,ಶುದ್ಧ ಕುಡಿಯುವ ನೀರಿಲ್ಲದೆ ಪರದಾಡುವಂತಾಗಿದೆ.
ತಾಲೂಕಿನಲ್ಲಿ ಬಹುದೊಡ್ಡ ಗ್ರಾಮ ಇದಾಗಿದೆ,ಇಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ವಾಸವಿದ್ದು,ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ, ಕಳೆದ ನಾಲ್ಕು ವರ್ಷಗಳಿಂದ ಕೆಟ್ಟು ನಿಂತಿರುವ ಈ ಶುದ್ಧ ಕುಡಿಯುವ ನೀರಿನ ಘಟಕದ ಸುತ್ತಲೂ ತಿಪ್ಪೆ ಗುಂಡೆಗಳು ಹಾಕಿ ಉಪಯೋಗಕ್ಕೆ ಬಾರದಂತಾಗಿದೆ.
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು,ಕುಡಿಯುವ ನೀರಿಗಾಗಿ ಜನರು ತತ್ತರಿಸುವಂತಾಗಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡಿ ಅದರ ಸುತ್ತಲೂ ಸ್ವಚ್ಛತೆ ಕಾಪಾಡಬೇಕೆಂದು ವಿನಂತಿಸಿಕೊಂಡಿದ್ದಾರೆ.