ವಾಡಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ.

ವಾಡಿ  ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ.

ವಾಡಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ.

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ,ಮುಖಂಡರು ಭಾವಚಿತ್ರಕ್ಕೆ ಗೌರವ ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಅವರು ಮಾತನಾಡಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದರು.

ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪಣತೊಡಬೇಕಾಗಿದೆ.

ಅಂಬೇಡ್ಕರ್ ಅವರು ಉದ್ಯೋಗಿ ಮತ್ತು ನಿರುದ್ಯೋಗಿಗಳಿಗೆ,ಪುರುಷರು ಮತ್ತು ಮಹಿಳೆಯರಿಗೆ ಉತ್ತಮ ಸೌಲಭ್ಯ ಸಿಗಬೇಕೆಂದು ಬಯಸಿದ್ದರು. ಜಾತಿ, ಮತ, ಧರ್ಮದಲ್ಲಿ ಭೇದವಿಲ್ಲದೆ ಎಲ್ಲಾ ವರ್ಗಗಳು ಒಗ್ಗಟ್ಟಾಗಿ ಸಾಗಿದಾಗ ಸಮಾಜ ಬೆಳೆಯುತ್ತದೆ ಎಂಬ ತತ್ತ್ವ ಪ್ರತಿಪಾದಿಸಿದ್ದರು ಎಂದು ಹೇಳಿದರು.

ತಾಲ್ಲೂಕ ಎಸ್ ಸಿ‌ ಮೂರ್ಚಾದ ಮಾಜಿ ಅಧ್ಯಕ್ಷ ರಾಜು ಮುಕ್ಕಣ್ಣ ಅವರು ಮಾತನಾಡಿ

ನಮ್ಮ ಇಂದಿನ ದಿನ ನಿತ್ಯದ ಜೀವನ ನಮ್ಮ ಸಂವಿಧಾನದ ತಳಹದಿಯ ಮೇಲೆ ನಿಂತಿದೆ. ಅಂದು ಅಂಬೇಡ್ಕರ್ ಸಮಸ್ಯೆಯ ಭಾಗವಾಗಿ, ಕಷ್ಟಕಾರ್ಪಣ್ಯಗಳನ್ನು ಎದುರಿಸಿದ್ದರಿಂದಾಗಿ ಸಮಾಜದಲ್ಲಿನ ಶೋಷಿತರ ಭವಣೆಯನ್ನು ಅರಿಯಲು ಸಾಧ್ಯವಾಯಿತು ಎಂದರು.

 ಅಂತಹ ಶೋಷಿತರಿಗೆ ಸಮಾಜದಲ್ಲಿ ಗೌರಯುತವಾಗಿ ಬದುಕುವ ಪರಿಸ್ಥಿತಿಯನ್ನು ತರಲು ಪ್ರೇರೆಪಿಸಿತು.

ಇಂದು ನಮ್ಮ ಮತಿಯ ಹಿಂದೆ ಒಂದೊಂದು ಮತದ ಪ್ರಭಾವ ದಟ್ಟವಾಗಿ ಬೀರಿ, ಎಲ್ಲವನ್ನು ಹಾಗೂ ಎಲ್ಲರನ್ನು ಸಂಶಯದಿಂದ ದೃಷ್ಟಿಯಿಂದ ನೋಡುವ ಪರಿಸ್ಥಿತಿಗೆ ಬಂದಿದ್ದೆವೆ. ಹಿಂದಿನ ಕಾಲದಲ್ಲಿ ವ್ಯಕ್ತಿಗಳ ನಡುವೆ ಭೌತಿಕ ಅಂತರವಿದ್ದರೂ, ಮಾನಸಿಕವಾಗಿ ಅವರು ಆಪ್ತರಾಗಿದ್ದರು. ಆದರೆ ಇಂದು ನಾವು ಭೌತಿಕ ಸಾಮೀಪ್ಯ ಬೆಳಸಿಕೊಂಡಿದ್ದರೂ, ಮಾನಸಿಕವಾಗಿ ಸಾಕಷ್ಟು ಅಂತರವನ್ನು ಹಾಕಿ ಕೊಂಡಿದ್ದೇವೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಯಾವುದೇ ಸಮಾಜದಲ್ಲಿ ಒಂದಿಬ್ಬರ ಮನಸ್ಥಿತಿ ಬದಲಾದರೆ ಇಡೀ ಸಮಾಜ ಬದಲಾವಣೆಯನ್ನು ಹೊಂದಲು ಸಾಧ್ಯವಿಲ್ಲ, ಇಡೀ ಸಮುದಾಯವೇ ಬದಲಾವಣೆಯತ್ತಾ ಹೆಜ್ಜೆ ಹಾಕಿದರೆ ಸರ್ವರ ಏಳಿಗೆ ಖಂಡಿತ ಸಾಧ್ಯ. ಆ ಹಿನ್ನಲೆಯಲ್ಲಿ ಅಂಬೇಡ್ಕರ್‍ರವರ ಚಿಂತನೆ ಸದಾ ನಮಗೆಲ್ಲರಿಗೂ ಉತ್ತಮ ಮಾರ್ಗದರ್ಶಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ವಿಠಲ ನಾಯಕ,ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ,ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ರವಿ ನಾಯಕ,

ಎಸ್ ಸಿ ಮೂರ್ಚಾದ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್,ಮುಖಂಡರಾದ ಸಿದ್ದಣ್ಣ ಕಲ್ಲಶೆಟ್ಟಿ,ಭೀಮಶಾ ಜೀರೋಳ್ಳಿ,ಹರಿ ಗಲಾಂಡೆ,ಹಣಮಂತ ಚವ್ಹಾಣ,ಶರಣಗೌಡ ಚಾಮನೂರ,ಭೀಮರಾವ ದೊರೆ,ಬಾಬು ಮೆತ್ರೆ,ಯಂಕಮ್ಮ ಗೌಡಗಾಂವ,ನಿರ್ಮಲ ಇಂಡಿ,ಪ್ರೇಮ, ನಾಗೇಶ್ ಸೇರಿದಂತೆ ಇತರರು ಇದ್ದರು.