ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ 134ನೇ ಜಯಂತಿ ಕಲಬುರಗಿ ಹೈಕೋರ್ಟ್ನಲ್ಲಿ ಆಚರಣೆ

ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ 134ನೇ ಜಯಂತಿ  ಕಲಬುರಗಿ ಹೈಕೋರ್ಟ್ನಲ್ಲಿ ಆಚರಣೆ

ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ 134ನೇ ಜಯಂತಿ ಕಲಬುರಗಿ ಹೈಕೋರ್ಟ್ನಲ್ಲಿ ಆಚರಣೆ

ಗುಲಬರ್ಗಾ ನ್ಯಾಯವಾದಿಗಳ ಸಂಘ – ಕಲಬುರಗಿ ಹೈಕೋರ್ಟ್ ಘಟಕ ಹಾಗೂ ಗುಲ್ಬರ್ಗಾ ಬಾರ್ ಅಸೋಸಿಯೇಷನ್ ವತಿಯಿಂದ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ 134ನೇ ಜಯಂತಿ ಅತ್ಯಂತ ವಿಜೃಂಭಣೆಯಿಂದ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶ್ರೀ ಗುಪ್ತಲಿಂಗ್ ಎಸ್. ಪಾಟೀಲ, ಉಪಾಧ್ಯಕ್ಷ ಶ್ರೀ ಅಶೋಕ್ ಬಿ. ಮುಲಗೆ, ಪ್ರಧಾನ ಕಾರ್ಯದರ್ಶಿ ಶ್ರೀ ಸಂತೋಷ ಹೆಚ್. ಪಾಟೀಲ್ ಧುದನಿ, ಖಜಾಂಚಿ ಶ್ರೀ ಶ್ರವಣಕುಮಾರ್ ಜಿ. ಮಠ, ಕಾರ್ಯದರ್ಶಿ ಶ್ರೀ ಭೀಮರಾಯ ಎಂ.ಎನ್. ಜಂಟಿ ಸೇರಿದಂತೆ ಹಲವಾರು ನ್ಯಾಯವಾದಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಮಾಜ ಪರಿವರ್ತನೆಗೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿ, ಅವರ ಆದರ್ಶಗಳನ್ನು ಅನುಸರಿಸುವ ಅಗತ್ಯತೆಯನ್ನು ಮುಖಂಡರು ವೀಕ್ಷಿಸಿದರು.