ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ – ಸಾವಿರಾರು ಯುವಕರಿಗೆ ಅವಕಾಶಗಳ ಬಾಗಿಲು

ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ – ಸಾವಿರಾರು ಯುವಕರಿಗೆ ಅವಕಾಶಗಳ ಬಾಗಿಲು

ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ – ಸಾವಿರಾರು ಯುವಕರಿಗೆ ಅವಕಾಶಗಳ ಬಾಗಿಲು

ಕಲಬುರಗಿ, ಏಪ್ರಿಲ್ 16: ಕೌಶಲ್ಯಾಭಿವೃದ್ಧಿ ಇಲಾಖೆ ಮತ್ತು ಸ್ಥಳೀಯ ಆಡಳಿತದ ಸಹಯೋಗದಲ್ಲಿ ಇಂದು ಕಲಬುರಗಿಯಲ್ಲಿ ಕರ್ನಾಟಕ ಸರ್ಕಾರದಿಂದ ಆಯೋಜಿಸಲಾದ ಬೃಹತ್ ಉದ್ಯೋಗ ಮೇಳಕ್ಕೆ ಭಾರಿ ಜನಸ್ಪಂದನೆ ಲಭಿಸಿತು. ಕಾರ್ಯಕ್ರಮವನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು, ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಾಯಕರು, *“ದೇಶದ ಅಭಿವೃದ್ಧಿಗೆ ಉದ್ಯೋಗ ಸೃಷ್ಟಿಯೇ ಮೂಲಾಧಾರ. ಯುವಕರು ಓದು ಮುಗಿಸಿದ ಬಳಿಕ ಉದ್ಯೋಗಕ್ಕಾಗಿ ಅಲೆದಾಡುವ ಸ್ಥಿತಿ ಇರಬಾರದು ಎಂಬುದೇ ನಮ್ಮ ಸರ್ಕಾರದ ಕಾಳಜಿ. ಈ ರೀತಿಯ ಉದ್ಯೋಗ ಮೇಳಗಳು, ಯುವಕರಿಗೆ ಅವಕಾಶಗಳನ್ನು ಒದಗಿಸುತ್ತವೆ,”* ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ದೊರಕಿಸುವುದು ಸುಲಭವಲ್ಲ ಎಂಬ ಸವಾಲುಗಳನ್ನು ಮನಗಂಡು, ಕಲ್ಯಾಣ ಕರ್ನಾಟಕ ಭಾಗದ ಯುವಜನತೆಗೆ ಅವಕಾಶ ನೀಡುವ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಲಾಗಿದೆ. ಮೇಳದಲ್ಲಿ ಪಾಲ್ಗೊಂಡಿರುವ ಕಂಪನಿಗಳು ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ನೀಡಿದ್ದು, ಸಾವಿರಾರು ಅಭ್ಯರ್ಥಿಗಳು ಸಂದರ್ಶನಗಳಲ್ಲಿ ಭಾಗವಹಿಸಿದರು. ಸಾಂಕೇತಿಕವಾಗಿ ಐದು ಅಭ್ಯರ್ಥಿಗಳನ್ನು ಸಾಮೂಹಿಕವಾಗಿ ಆಯ್ಕೆ ಪತ್ರಗಳನ್ನು ನೀಡಿದರು.

ಈ ಮಹತ್ವದ ಕಾರ್ಯಕ್ರಮದಲ್ಲಿ ಶಾಸಕರಾದ ಬಿ.ಆರ್. ಪಾಟೀಲ್, ಎಂ.ವೈ. ಪಾಟೀಲ್, ಅಲ್ಲಮಪ್ರಭು ಪಾಟೀಲ್, ಖನಿಜ ಫಾತಿಮಾ, ಅಜಯ್ ಸಿಂಗ್ ಹಾಗೂ ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ,ಶರಣಬಸಪ್ಪ ದರ್ಶನಾಪುರ್, ಈಶ್ವರ್ ಖಂಡ್ರೆ, ತಿಪ್ಪಣ್ಣಪ್ಪ ಕಮಕನೂರ್, ಮಾಲಿಕಯ್ಯ ಗುತ್ತೇದಾರ್ ಸೇರಿದಂತೆ ಅನೇಕ ಶಾಸಕರು ಸಚಿವರು ವಿಧಾನ ಪರಿಷತ್ ಸದಸ್ಯರು ಗಣ್ಯಮಾನ್ಯರು ವೇದಿಕೆ ಮೇಲೆ ಇದ್ದರು.

ಮೇಳದ ಯಶಸ್ಸು ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಉದ್ಯೋಗ ಮೇಳಗಳನ್ನು ಆಯೋಜಿಸುವ ಮೂಲಕ ಯುವಕರಿಗೆ ಅವಕಾಶಗಳ ಸೃಷ್ಟಿಗೆ ಸರ್ಕಾರ ಬದ್ಧವಿದೆ ಎಂಬುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಮೇಳದಲ್ಲಿ ಸಾವಿರಾರು ಅಭ್ಯರ್ಥಿಗಳು ಕಾಂಗ್ರೆಸ್ ಪಕ್ಷದ ಗಣ್ಯಮಾನ್ಯರು ಉಪಸ್ಥಿತರಿದ್ದರು

---