ಕಾಂಗ್ರೆಸ್ ಆಡಳಿತ ವೈಫಲ್ಯ ಖಂಡಿಸಿ ಕಲಬುರಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ"

ಕಾಂಗ್ರೆಸ್ ಆಡಳಿತ ವೈಫಲ್ಯ ಖಂಡಿಸಿ ಕಲಬುರಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ"
ಕಲಬುರಗಿ, ಏಪ್ರಿಲ್ 18: ಕಾಂಗ್ರೆಸ್ ಸರಕಾರದ ಎರಡು ವರ್ಷಗಳ ಆಡಳಿತ ವೈಫಲ್ಯವನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಇಂದು ನಗರದಲ್ಲಿನ ಪ್ರಮುಖ ಬೀದಿಗಳಲ್ಲಿ "ಜನಾಕ್ರೋಶ ಯಾತ್ರೆ" ಆಯೋಜಿಸಲಾಯಿತು.
ಈ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಬಿ.ವೈ. ವಿಜಯೇಂದ್ರ ಅವರು ಭಾಗವಹಿಸಿ, ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿದರು. ಅವರೊಂದಿಗೆ ಚಲವಾದಿ ನಾರಾಯಣಸ್ವಾಮಿ, ಬಸವರಾಜ ಮತ್ತಿಮಡು, ಡಾ. ಉಮೇಶ್ ಜಾಧವ್, ಬಿ.ಜಿ. ಪಾಟೀಲ, ಸುಭಾಷ ಗುತ್ತೇದಾರ, ರಾಜಕುಮಾರ ಪಾಟೀಲ ತೇಲ್ಕೂರ, ಅಶೋಕ ಬಗಲಿ, ದತ್ತಾತ್ರೇಯ ಪಾಟೀಲ ರೇವೂರ, ಚಂದು ಪಾಟೀಲ, ಅಮರನಾಥ ಪಾಟೀಲ, ದೇವೀಂದ್ರ ದೇಸಾಯಿ ಕಲ್ಲೂರ, ನಿತೀನ್ ಗುತ್ತೇದಾರ, ಸುನೀಲ ವಲ್ಯಾಪುರೆ ಸೇರಿದಂತೆ ಹಲವಾರು ಪ್ರಮುಖ ಮುಖಂಡರು ಮತ್ತು ಶೇಕಡಾಂತರ ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡರು.
ಯಾತ್ರೆಯಲ್ಲಿ ಭಾಷಣ ಮಾಡಿದ ನಾಯಕರಿಗೆ ಸಾರ್ವಜನಿಕರಿಂದ ಭಾರೀ ಪ್ರತಿಕ್ರಿಯೆ ಲಭಿಸಿತು. ಈ ಯಾತ್ರೆಯು ಜನಮನದಲ್ಲಿ ಹೊಸ ಚೈತನ್ಯ ತುಂಬಿದೆ ಎಂದು ಬಿಜೆಪಿ ನಾಯಕರು ಅಭಿಪ್ರಾಯಪಟ್ಟರು.