ಭಯೋತ್ಪಾದಕ ದಾಳಿ ಹಿನ್ನೆಲೆ: ಸೌದಿ ಪ್ರವಾಸ ಮೊಟಕುಗೊಳಿಸಿದ ಮೋದಿ, ದೆಹಲಿಯಲ್ಲಿ ಉನ್ನತ ಭದ್ರತಾ ಸಭೆ

ಭಯೋತ್ಪಾದಕ ದಾಳಿ ಹಿನ್ನೆಲೆ: ಸೌದಿ ಪ್ರವಾಸ ಮೊಟಕುಗೊಳಿಸಿದ ಮೋದಿ, ದೆಹಲಿಯಲ್ಲಿ ಉನ್ನತ ಭದ್ರತಾ ಸಭೆ

ಪ್ರಧಾನಿ ಮೋದಿ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಸೌದಿ ಪ್ರವಾಸ ಮೊಟಕುಗೊಳಿಸಿ ದೇಶಕ್ಕೆ ವಾಪಸ್ – ಉನ್ನತ ಮಟ್ಟದ ಭದ್ರತಾ ಸಮಿತಿ ಸಭೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಭೀಕರ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಮಂಗಳವಾರ ರಾತ್ರಿ ದೆಹಲಿಗೆ ವಾಪಸ್ ಆಗಿದ್ದಾರೆ.

ದೇಶಕ್ಕೆ ಮರಳಿದ ಕೂಡಲೇ ಪ್ರಧಾನಿ ಮೋದಿ ಅವರು ಉನ್ನತ ಮಟ್ಟದ ಭದ್ರತಾ ಸಮಿತಿ ಸಭೆಯನ್ನು ಕರೆಸಿದ್ದರು. ಈ ಸಭೆಯಲ್ಲಿ ದಾಳಿಯ ಕುರಿತು ವಿವರವಾದ ಮಾಹಿತಿ ನೀಡಲಾಯಿತು ಎಂದು ಮೂಲಗಳು ತಿಳಿಸಿವೆ. ಭದ್ರತಾ ತಜ್ಞರು ಮತ್ತು ಸಂಬಂಧಿತ ಇಲಾಖೆಯ ಪ್ರಮುಖ ಅಧಿಕಾರಿಗಳೊಂದಿಗೆ ನಡೆಸಿದ ಈ ಸಭೆಯಲ್ಲಿ ಮುಂದಿನ ಕ್ರಮಗಳ ಕುರಿತು ಪ್ರಧಾನಿ ಅವರು ಸೂಕ್ತ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸೇರಿದಂತೆ ಅನೇಕ ಹಿರಿಯ ಭದ್ರತಾ ಸಲಹೆಗಾರರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ಭದ್ರತೆ ಮತ್ತು ರಾಷ್ಟ್ರೀಯ ಸ್ವಾಭಿಮಾನಕ್ಕೆ ಪ್ರಧಾನಿಯವರ ಈ ತುರ್ತು ಪ್ರತಿಕ್ರಿಯೆ ಗಮನಸೆಳೆದಿದೆ.

-