ಪಹಲ್ಗಾಮ್ ಭಯೋತ್ಪಾದಕ ದಾಳಿ: ದಾಳಿಕೋರರಿಗೆ ಸೂಕ್ತ ಶಿಕ್ಷೆ ಆಗಬೇಕು ಪಕ್ಷಬೇಧ ಮರೆತು ಖಂಡಿಸಬೇಕು : ಶಶೀಲ್ ಜಿ ನಮೋಶಿ

ಪಹಲ್ಗಾಮ್ ಭಯೋತ್ಪಾದಕ ದಾಳಿ: ದಾಳಿಕೋರರಿಗೆ ಸೂಕ್ತ ಶಿಕ್ಷೆ ಆಗಬೇಕು ಪಕ್ಷಬೇಧ ಮರೆತು ಖಂಡಿಸಬೇಕು : ಶಶೀಲ್ ಜಿ ನಮೋಶಿ

ಪಹಲ್ಗಾಮ್ ಭಯೋತ್ಪಾದಕ ದಾಳಿ: ದಾಳಿಕೋರರಿಗೆ ಸೂಕ್ತ ಶಿಕ್ಷೆ ಆಗಬೇಕು

ಪಕ್ಷಬೇಧ ಮರೆತು ಖಂಡಿಸಬೇಕು : ಶಶೀಲ್ ಜಿ ನಮೋಶಿ 

ಕಲಬುರ್ಗಿ:ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರ ಹತ್ಯೆಯನ್ನು ನಾನು ಅತ್ಯಂತ ಉಗ್ರವಾಗಿ ಖಂಡಿಸುತ್ತೇನೆ. ದಾಳಿಗೆ ಕಾರಣರಾದವರಿಗೆ ಸೂಕ್ತ ಶಿಕ್ಷೆ ನೀಡುವಂತೆ ಕೇಂದ್ರ ಸರಕಾರಕ್ಕೆ ಆಗ್ರಹಿಸುವೆ.

ʼಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಅತ್ಯಂತ ಖಂಡನೀಯ ಮತ್ತು ಹೃದಯ ವಿದ್ರಾವಕವಾಗಿದೆ. ನಾವು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಮತ್ತು ದಾಳಿಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಶೀಲ್ ಜಿ ನಮೋಶಿ ಹೇಳಿದ್ದಾರೆ.

ʼಇದು ನಮ್ಮ ರಾಷ್ಟ್ರದ ಏಕತೆ ಮತ್ತು ಸಮಗ್ರತೆಯ ಮೇಲಿನ ದಾಳಿಯಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಸಂಘಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಈ ಭಯೋತ್ಪಾದಕ ಕೃತ್ಯವನ್ನು ಖಂಡಿಸಬೇಕು. ಸರಕಾರ ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ಪರಿಹಾರ ಮತ್ತು ನೆರವನ್ನು ನೀಡಬೇಕು. ಈ ದಾಳಿಗೆ ಕಾರಣರಾದವರಿಗೆ ಸೂಕ್ತ ಶಿಕ್ಷೆಯನ್ನು ನೀಡಬೇಕುʼ ಎಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಶೀಲ್ ಜಿ ನಮೋಶಿ ಆಗ್ರಹಿಸಿದ್ದಾರೆ