ಕೃಷ್ಣಾ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳಿಂದ ಸಸಿ ನೆಟ್ಟು ಸ್ವಾತಂತ್ರ್ಯೋತ್ಸವದ ಸಂಭ್ರಮ ಆಚರಿಸಿದರು

ಕೃಷ್ಣಾ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳಿಂದ ಸಸಿ ನೆಟ್ಟು ಸ್ವಾತಂತ್ರ್ಯೋತ್ಸವದ ಸಂಭ್ರಮ  ಆಚರಿಸಿದರು

ಕೃಷ್ಣಾ ಗ್ರಾಮೀಣ ಬ್ಯಾಂಕ್ , ಸಸಿ ನೆಟ್ಟು ಸ್ವಾತಂತ್ರ್ಯೋತ್ಸವದ ಸಂಭ್ರಮ ಆಚರಿಸಿದರು 

ಶಹಾಬಾದ : - ಭಾರತದ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ವತಿಯಿಂದ ಬಾಲ ವಿಧ್ಯಾ ಮಂದಿರ ಶಾಲೆಯ ಮೈದಾನದಲ್ಲಿ ಸಸಿಗಳನ್ನು ನೆಟ್ಟು ಸಂಭ್ರಮ ಪಟ್ಟರು. 

ಈ ಸಂಧರ್ಭದಲ್ಲಿ ಬ್ಯಾಂಕ್ ವ್ಯವಸ್ಥಾಪಕ ಆರ್. ವಿ. ಗಾಜರೆ ಮಾತನಾಡಿ, ಭಾರತ ಸ್ವಾತಂತ್ರ್ಯವಾಗಿದೆ ಆದರೆ ಇಂದಿನ ದಿನಮಾನಗಳಲ್ಲಿ ಆರೋಗ್ಯಕರ ಬದುಕನ್ನು ನಡೆಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಚ ಹಾಗೂ ಉತ್ತಮ ಪರಿಸರ ಅತಿ ಅಗತ್ಯವಾಗಿದ್ದು, ಅದಕ್ಕಾಗಿ ನಾವು ಮರ ಗಿಡಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸುವ ಮೂಲಕ ಪ್ರಕೃತಿಗೆ ನಮ್ಮ ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಹಾಗೆ ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.

ಈ ಸಂಧರ್ಭದಲ್ಲಿ ಕೃಷ್ಣಾ ಗ್ರಾಮೀಣ ಬ್ಯಾಂಕ್

ಸಿಬ್ಬಂದಿ ಗಳಾದ ಮಿಥುನ ವೈದ್ಯ, ಹಾಜಪ್ಪ ಹೋಳಕರ ಮತ್ತು ಯುವ ನಾಯಕ ಸ್ನೇಹಿಲ ಜಾಯಿ ಜೊತೆಗೆ ವಿದ್ಯಾರ್ಥಿಗಳು ಇದ್ದರು.

ವರದಿ ನಾಗರಾಜ್ ದಂಡವತಿ