ಮುಡಾ ಹಗರಣದಲ್ಲಿ ಸಿಲುಕಿಸಲು ಕೇಂದ್ರ ಸರ್ಕಾರದಿಂದ ಸಂಚು : ಸಚಿವ ಪ್ರಿಯಾಂಕ್ ಖರ್ಗೆ ಆರೋಪ
ಮುಡಾ ಹಗರಣದಲ್ಲಿ ಸಿಲುಕಿಸಲು ಕೇಂದ್ರ ಸರ್ಕಾರದಿಂದ ಸಂಚು : ಸಚಿವ ಪ್ರಿಯಾಂಕ್ ಖರ್ಗೆ ಆರೋಪ
ಬೆಂಗಳೂರು : ರಾಜ್ಯದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ಕರ್ನಾಟಕ ರಾಜ್ಯಪಾಲರು ನಿರ್ಧಾರ ಮಾಡಿದ್ದು ಸಿದ್ದರಾಮಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ಸಿಲುಕಿಸಲು ಕೇಂದ್ರ ಸರ್ಕಾರ ಮಾಡಿರುವ ಸಂಚು ಎಂದು ವಾಗ್ಧಾಳಿ ನಡೆಸಿದ್ದಾರೆ.
ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸಲು ರಾಜಭವನವನ್ನು ಬಿಜೆಪಿಯ ಟೂಲ್ ಆಗಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ನಾಯಕರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ತನ್ನ ಎಲ್ಲಾ ಅಸ್ತ್ರಗಳನ್ನು ಪ್ರಯೋಗಿಸುತ್ತಿದೆ. ಆದರೆ ನಮ್ಮ ಪರವಾಗಿರುವ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.