ನಾಳೆ ದಿನಾಂಕ 11/05/2025 ರಂದು ಅಂತಾರಾಷ್ಟ್ರೀಯ ನರ್ಸ್ ದಿನಾಚರಣೆ ಬಸವೇಶ್ವರ ಆಸ್ಪತ್ರೆಯಲ್ಲಿ

ನಾಳೆ ದಿನಾಂಕ 11/05/2025 ರಂದು ಅಂತಾರಾಷ್ಟ್ರೀಯ ನರ್ಸ್ ದಿನಾಚರಣೆ ಬಸವೇಶ್ವರ ಆಸ್ಪತ್ರೆಯಲ್ಲಿ
ಕಲಬುರ್ಗಿ: ನಾಳೆ ದಿನಾಂಕ 11/05/2025 ರ ರವಿವಾರ ದಿನದಂದು ಮುಂಜಾನೆ 11 ಗಂಟೆಗೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಭಾಭವನದಲ್ಲಿ ಅಂತಾರಾಷ್ಟ್ರೀಯ ನರ್ಸ್ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಆಗಮಿಸಲಿದ್ದಾರೆ. ಗೌರವ ಅತಿಥಿಗಳಾಗಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಆಸ್ಪತ್ರೆಯ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಡಾ ಕಿರಣ್ ದೇಶಮುಖ್ ಉಪಸ್ಥಿತರಿರಲಿದ್ದಾರೆ. ಎಲ್ಲ ಆಡಳಿತ ಮಂಡಳಿಯ ಸದಸ್ಯರು ಹಾಗೂ ಆಸ್ಪತ್ರೆಯ ಎಲ್ಲ ವೈದ್ಯಾಧಿಕಾರಿಗಳು ಸಿಬ್ಬಂದಿ ಹಾಜರಿರಲಿದ್ದಾರೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಧ್ಯಮ ಸಂಯೋಜಕ ಐ ಕೆ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
.