ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಅಂಗವಾಗಿ ರಕ್ತದಾನ ಶಿಬಿರ

ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಅಂಗವಾಗಿ ರಕ್ತದಾನ ಶಿಬಿರ

ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಅಂಗವಾಗಿ ರಕ್ತದಾನ ಶಿಬಿರ

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ರವರ ಜಯಂತಿಯನ್ನು ಆಚರಿಸುವ ಸಂದರ್ಭದಲ್ಲಿ, ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ವಿಶೇಷ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಹೇಳಿದರು 

ಈ ಶಿಬಿರವು ದಿನಾಂಕ 27 ಮೇ 2025, ಮಂಗಳವಾರದಂದು ಬೆಳಿಗ್ಗೆ 10:00 ಗಂಟೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾವೇರಿ ವಸತಿ ನಿಲಯದಲ್ಲಿ ನಡೆಯಲಿದ್ದು, ಇದನ್ನು ನಿಲಯ ಪಾಲಕರಾದ ನಾಗಪ್ಪ ನಗನೂರ್ ಮತ್ತು ಒಕ್ಕೂಟದ ಅಧ್ಯಕ್ಷರಾದ ಸಂತೋಷಕುಮಾರ ಎಸ್.ಪಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು 

ರಕ್ತದಾನಕ್ಕೆ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಮುಂಚಿತವಾಗಿ ನೊಂದಾಯಿಸಿಕೊಳ್ಳುವಂತೆ ನಿರ್ವಾಹಕರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 7676605706 (ಸಂತೋಷಕುಮಾರ ಎಸ್.ಪಿ) ಅನ್ನು ಸಂಪರ್ಕಿಸಬಹುದಾಗಿದೆ.

ರಕ್ತದಾನ ಶಿಬಿರವು ಮಾನವೀಯತೆಯ ಮೌಲ್ಯಗಳನ್ನು ಉತ್ತೇಜಿಸುವ ಉತ್ತಮ ಅವಕಾಶವಾಗಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.