ಛಲವಾದಿ ನಾರಾಯಣ ಸ್ವಾಮಿ ಮೇಲೆ ಕಾಂಗ್ರೆಸ್‌ಗರಿಂದ ಗುಂಡಾ ವರ್ತನೆ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸಚಿವರ ವಿರುದ್ಧ ಬಿಜೆಪಿಯಿಂದ ಘೇರಾವ: ದೇವಿಂದ್ರ ದೇಸಾಯಿ ಎಚ್ಚರಿಕೆ

ಛಲವಾದಿ ನಾರಾಯಣ ಸ್ವಾಮಿ ಮೇಲೆ ಕಾಂಗ್ರೆಸ್‌ಗರಿಂದ ಗುಂಡಾ ವರ್ತನೆ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸಚಿವರ ವಿರುದ್ಧ ಬಿಜೆಪಿಯಿಂದ ಘೇರಾವ: ದೇವಿಂದ್ರ ದೇಸಾಯಿ ಎಚ್ಚರಿಕೆ

ಛಲವಾದಿ ನಾರಾಯಣ ಸ್ವಾಮಿ ಮೇಲೆ ಕಾಂಗ್ರೆಸ್‌ಗರಿಂದ ಗುಂಡಾ ವರ್ತನೆ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸಚಿವರ ವಿರುದ್ಧ ಬಿಜೆಪಿಯಿಂದ ಘೇರಾವ: ದೇವಿಂದ್ರ ದೇಸಾಯಿ ಎಚ್ಚರಿಕೆ

ಕಲಬುರಗಿ: ವಿಧಾನ ಪರಿಷತ್ತನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣ ಸ್ವಾಮಿಯವರನ್ನು ಚಿತ್ತಾಪೂರ ಪ್ರವಾಸಿ ಮಂದಿರದಲ್ಲಿ ಸುಮಾರು ಐದು ಗಂಟೆಗಳ ಕಾಲ ಕೂಡಿಹಾಕಿರುವ ಕಾಂಗ್ರೆಸ್ಸಿಗರ ಗುಂಡಾವರ್ತನೆ ಸರಿಯಲ್ಲ, ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಸಂಘರ್ಷಕ್ಕೆ ಪ್ರಚೋದನೆ ನೀಡುವ ಜಿಲ್ಲಾ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಿಜೆಪಿಯಿಂದ ಘೇರಾವ ಮಾಡಬೇಕಾಗುತ್ತದೆ ಎಂದು ಬಿಜೆಪಿಯ ಓಬಿಸಿ ಮೋರ್ಚಾದ ನಗರಾಧ್ಯಕ್ಷ ದೇವಿಂದ್ರ ದೇಸಾಯಿ ಕಲ್ಲೂರ ಎಚ್ಚರಿಕೆ ನೀಡಿದ್ದಾರೆ.

ಮೋದಿಯವರ ಕುರಿತು ಕಾಂಗ್ರೆಸ್‌ಗರು ಮಾತನಾಡುತ್ತಾರೆ ಎಂದು ಮಾಧ್ಯಮದವರ ಪ್ರಶ್ನೆಗೆ ಛಲವಾದಿ ನಾರಾಯಣ ಸ್ವಾಮಿ ಉತ್ತರಿಸುತ್ತಾ, ನಾಣ್ಣುಡಿಯಂತೆ ಆನೆ ಹೋಗುವಾಗ ಶ್ವಾನ ಬೋಗಳಿದರೆ ಏನು ಆಗುವುದಿಲ್ಲ ಎಂಬಾರ್ಥದಲ್ಲಿ ಉತ್ತರ ನೀಡಿದ್ದಾರೆ. ಆದರೆ ಪ್ರಿಯಾಂಕ್ ಖರ್ಗೆ ನಾಯಿ ಇದ್ದಂತೆ ಎಂದು ಹೇಳಿಲ್ಲ. ಸಚಿವ ಖರ್ಗೆಯವರ ಬೆಂಗಲಿಗರು ಪ್ರಿಯಾಂಕ್ ಖರ್ಗೆಯವರನ್ನು ನಾಯಿಗೆ ಹೋಲಿಸಿದ್ದರಿ ಎಂದು ಆರೋಪಿಸಿ ಛಲವಾದಿ ನಾರಾಯಣ ಸ್ವಾಮಿಯವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂಧಿಸಿದಲ್ಲದೇ ಅವರ ಕಾರಿನ ಮೇಲೆ ಬಣ್ಣ ಎರಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದು ನಿಂದನಿಯವಾಗಿದೆ. 

ಸ್ಥಳದಲ್ಲಿಯೇ ಇದ್ದ ಪೊಲೀಸರು ಅಸಾಯಕರಂತೆ ಇರುವುದು ಕಂಡರೆ ಚಿತ್ತಾಪೂರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಜೀವ ಭಯವಿರುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಆರೋಪಿಸಿದ ದೇವಿಂದ್ರ ದೇಸಾಯಿ ಕೂಡಲೇ ಗಂಡಾ ವರ್ತನೆ ಮಾಡಿರುವ ಕಾಂಗ್ರೆಸ್‌ರ ಮೇಲೆ ಗೂಂಡಾ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಬೇಕು. ಅವರನ್ನು ಬಂಧಿಸಿ ಜೇಲಿಗೆ ಅಟ್ಟಬೇಕು ಎಂದು ಒತ್ತಾಯಿಸಿದ್ದಾರೆ.

ಮುಂದಿನ ದಿನಗಳಲ್ಲಿ ಬಿಜೆಪಿಯ ನಾಯಕರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಹಲ್ಲೆಗೆ ಮುಂದಾಗವುದು, ರಾಷ್ಟç ನಾಯಕರ ಬಗ್ಗೆ ಹಗುರವಾಗಿ ಮಾತನಾಡುವುದು ಕಂಡರೆ ಪೊಲೀಸರು ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು. ಇಲ್ಲವಾದರೆ ಬಿಜೆಪಿ ಮುಖಂಡರು, ನಾಯಕರು, ಕಾರ್ಯಕರ್ತರು ಸೇರಿಕೊಂಡು ಸಚಿವರು ಕಂಡಲ್ಲಿ ಘೇರಾವ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿಯ ಓಬಿಸಿ ಮೋರ್ಚಾದ ನಗರಾಧ್ಯಕ್ಷ ದೇವಿಂದ್ರ ದೇಸಾಯಿ ಪ್ರಕಟಣೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.