ಕೊರೊನಾ ಪರಿಸ್ಥಿತಿ ನಿಯಂತ್ರಣ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಪರಿಶೀಲನಾ ಸಭೆ

ಕೊರೊನಾ ಪರಿಸ್ಥಿತಿ ನಿಯಂತ್ರಣ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಪರಿಶೀಲನಾ ಸಭೆ

ಕೊರೊನಾ ಪರಿಸ್ಥಿತಿ ನಿಯಂತ್ರಣ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಪರಿಶೀಲನಾ ಸಭೆ

ಬೆಂಗಳೂರು, ಮೇ 26: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಲು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಮುಖ್ಯಮಂತ್ರಿ ಗೃಹ ಕಚೇರಿ ‘ಕಾವೇರಿ’ಯಲ್ಲಿ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್‌ ಹಾಗೂ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಕೋವಿಡ್ ಸೋಂಕಿನ ಲಕ್ಷಣಗಳು, ವೈದ್ಯಕೀಯ ಸಿದ್ಧತೆ, ಔಷಧಿ ದೊರೆವಿಕೆ, ಆಸ್ಪತ್ರೆಗೆ ದಾಖಲಾತಿ ಸ್ಥಿತಿ ಹಾಗೂ ಸಾರ್ವಜನಿಕರಿಗೆ ಜಾಗೃತಿಯ ಬಗ್ಗೆ ಚರ್ಚಿಸಲಾಗಿದ್ದು, ಅಗತ್ಯವಿದ್ದಲ್ಲಿ ಕೆಲ ನಿಗಾ ಕ್ರಮಗಳನ್ನು ಮತ್ತೆ ಜಾರಿ ಮಾಡುವ ಬಗ್ಗೆ ಚಿಂತನೆ ನಡೆಯಿತು.

ಮುಖ್ಯಮಂತ್ರಿ ಅವರು ಇಲಾಖೆಗೆ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳುವ ಸೂಚನೆ ನೀಡಿ, ಸಾರ್ವಜನಿಕರ ಸಹಕಾರದಿಂದ ಮಾತ್ರ ವೈರಸ್‌ ನಿಯಂತ್ರಣ ಸಾಧ್ಯವಿದೆ ಎಂಬುದರ ಮೇಲೆ ಒತ್ತಾಯಿಸಿದರು.