ತಾರಫೈಲ್ ಪ್ರೌಢಶಾಲೆ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಶೀಲ್ ನಮೋಶಿ

ತಾರಫೈಲ್ ಪ್ರೌಢಶಾಲೆ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಶೀಲ್ ನಮೋಶಿ
ಕಲಬುರ್ಗಿ: ಬಿರು ಬಿಸಿಲಿನ ಬೇಸಿಗೆ ರಜೆ ಮಜಾ ಅನುಭವಿಸಿದ್ದ ಮಕ್ಕಳು ಮತ್ತೆ ಶಾಲೆಯತ್ತ ಮರಳುತ್ತಿದ್ದು, ಇಂದು ಸರ್ಕಾರಿ ಪ್ರೌಢಶಾಲೆ ತಾರಫೈಲ್ ದಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಭಾಗವಹಿಸಿದ್ದರು ಇಂದು ವಿದ್ಯಾರ್ಥಿಗಳನ್ನು ಶಿಕ್ಷಣ ಇಲಾಖೆಯು ರಜಾ ಅವದಿಯನಂತರ ಮುಂದಿನ ತರಗತಿಗಳಿಗೆ ವಿದ್ಯಾರ್ಥಿಗಳನ್ನು ವಿಜ್ರಂಭಣೆಯಿಂದ ಸ್ವಾಗತಿಸಿತು.
ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಶಾಲೆಗಳು, ಶಿಕ್ಷಕರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡರು ಇದರಲ್ಲಿ ನಾನು ಸಹ ಸಂತೋಷದಿಂದ ಪಾಲ್ಗೊಂಡೆ ಎಂದು ವಿಧಾನ ಪರಿಷತ್ ಸದಸ್ಯರು ತಿಳಿಸಿದರು ಇಂದು ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ, ಮಕ್ಕಳಿಗೆ ಸಿಹಿ ನೀಡಿ ಮುಂದಿನ ವಿದ್ಯಾರ್ಥಿಗಳ ಭವಿಷ್ಯದ ಜೀವನ ಉಜ್ವಲವಾಗಿರಲಿ ಎಂದು ಮುಂದಿನ ತರಗತಿಗಳಿಗೆ ಸ್ವಾಗತಿಸಿದ ಶಿಕ್ಷಕ ಸಮುದಾಯಕ್ಕೆ ಅಭಿನಂದನೆಗಳು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳು ಹಾಗೂ ಸಮಸ್ತ ಶಿಕ್ಷಕ ಸಿಬ್ಬಂದಿ ಹಾಜರಿದ್ದರು.