ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಇಬ್ಬರು ಆರೋಪಿಗಳ ಬಂಧನ

ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ  ಇಬ್ಬರು ಆರೋಪಿಗಳ ಬಂಧನ

ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ, ಜೂನ್ 1 – ನಗರದ ಹೊರವಲಯದ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಆರೂ ಮಂದಿ ದುಷ್ಕರ್ಮಿಗಳು ಎರಡು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕಾಕತಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.

ಪೋಲೀಸರು ಪ್ರಕರಣ ದಾಖಲಾದ ಒಂದೇ ದಿನದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಎ1 ಸೇರಿದಂತೆ ಉಳಿದ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

ಘಟನೆಯ ವಿವರ:

  ಬಾಲಕಿ ಆಕೆಯ ಸ್ನೇಹತ  ಗುಡ್ಡದ ಕಡೆಗೆ ಹೋಗಿದ್ದು, ಅಲ್ಲಿ ಆರೂ ಮಂದಿ ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಆರೋಪಿಗಳು ವಿಡಿಯೋ ಮಾಡಿ, ನಂತರ ಅದನ್ನು ಬಳಸಿ ಪುನಃ ಶೋಷಣೆ ನಡೆಸಿದ್ದಾರೆ. ಪುನಃ ಅತ್ಯಾಚಾರ ನಡೆಸಿದ ಸಂದರ್ಭದಲ್ಲಿಯೂ ವಿಡಿಯೋ ಮಾಡಲಾಗಿದೆ. ಇತ್ತೀಚೆಗೆ ಆ ವಿಡಿಯೋಗಳನ್ನು ಬಳಸಿ ಬಾಲಕಿಗೆ ಬೆದರಿಕೆ ಹಾಕುತ್ತಿರುವ ಹಿನ್ನೆಲೆಯಲ್ಲಿ, ಬಾಲಕಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

ರೆಸಾರ್ಟ್‌ನಲ್ಲಿಯೂ ಗ್ಯಾಂಗ್ರೇಪ್ – ಮತ್ತೊಂದು ಪ್ರಕರಣ

ಇನ್ನೊಂದು ಘಟನೆಯು ಕಳೆದ ವಾರ ಬೆಳಗಾವಿಯ ಹೊರವಲಯದ ರೆಸಾರ್ಟ್‌ನಲ್ಲಿ ನಡೆದಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಪುತ್ರನ ಸಹ ಭಾಗಿತ್ವವಿದೆ ಎಂಬ ಆರೋಪ ಕೇಳಿಬಂದಿದೆ.

ಕಾಲೇಜಿಗೆ ರಜೆ ಇದ್ದ ಸಂದರ್ಭದಲ್ಲಿ ಮೂವರು ವಿದ್ಯಾರ್ಥಿಗಳು ರೆಸಾರ್ಟ್‌ನಲ್ಲಿ ಪಾರ್ಟಿ ಆಯೋಜಿಸಿದ್ದರು. ಈ ವೇಳೆ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ, ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಪ್ರಕರಣವೊಂದು ಬಾಲಕಿಯ ಕೊರಳಿನ ಚೈನ್ ಮಿಸ್ ಆದ ಹಿನ್ನೆಲೆಯಲ್ಲಿ ಪೋಷಕರ ಗಮನಕ್ಕೆ ಬಂದಿದೆ. ತನಿಖೆ ನಡೆಸಿದ ಟಿಳಕವಾಡಿ ಪೊಲೀಸರು ಪ್ರಕರಣವನ್ನು ಮಾರ್ಕೆಟ್ ಠಾಣೆಗೆ ವರ್ಗಾಯಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳ ವಿಚಾರಣೆ ಮುಂದುವರಿದಿದೆ:

ಈ ಪ್ರಕರಣದಲ್ಲಿ ರೂಮ್ ವ್ಯವಸ್ಥೆ ಕಲ್ಪಿಸಿದ ಸಾಕೀಬ್ ನಿಜಾಮಿ ಎಂಬಾತನನ್ನು ಹಾಗೂ ಇನ್ನೊಬ್ಬ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಮಗ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದನೆಂಬ ಮಾಹಿತಿಯು ಬಯಲಾಗಿದೆಯೆಂದು ತಿಳಿದು ಬಂದಿದೆ.