ಆರ್‌ಸಿಬಿ ತಂಡಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ ಅಂಬಾರಾಯ ಅಷ್ಠಗಿ ಅಭಿನಂದನೆ

ಆರ್‌ಸಿಬಿ ತಂಡಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ ಅಂಬಾರಾಯ ಅಷ್ಠಗಿ ಅಭಿನಂದನೆ

ಐಪಿಎಲ್ 18 ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಸದೆಬಡಿದು ಕಪ್ ತನ್ನ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ ಅಂಬಾರಾಯ ಅಷ್ಠಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಆರ್‌ಸಿಬಿಯ ಆಟಗಾರರು ನನಸಾಗಿಸಿದ್ದಾರೆ ಎಂದು ಅವರು ಹೇಳಿದರು.

ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಹಾಗೂ ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ತಂಡದ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎಂದು ಹೇಳಲು ಹೆಮ್ಮೆ ಎನಿಸುತ್ತದೆ.

ರಾಜ್ಯದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿ ಪಸರಿಸಿದ ಆರ್ ಸಿ ಬಿ ತಂಡಕ್ಕೆ ಇಂದು ರಾಜಧಾನಿ 

ಇಂದು ಬೆಂಗಳೂರಿನಲ್ಲಿ ವಿಧಾನ ಸೌಧ ದಿಂದ ಚಿನ್ನಸ್ವಾಮಿ ಕ್ರೀಡಾಂಗಣದ ವರೆಗೂ ಮೆರವಣಿಗೆ ಮೂಲಕ ಸಂಭವಿಸುತ್ತಿರುವವುದು ಸಂತಸದಾಯಕ ಸಂಗತಿಯಾಗಿದೆ ಎಂದು ಡಾ ಅಂಬಾರಾಯ ಅಷ್ಠಗಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಇಂದು ಇತಿಹಾಸ ಸೃಷ್ಟಿಸಿದ ದಿನ ಕೊನೆಯದಾಗಿ, ಈ ೧೮ ರ ಕಪ್ ನಮ್ಮದಾಯಿತು.