ಆರ್.ಸಿ.ಬಿ ಅಭಿಮಾನಿಗಳ ಸಾವಿಗೆ ಸರಕಾರ ನೈತಿಕ ಹೊಣೆಯಾಗಲಿ

ಆರ್.ಸಿ.ಬಿ ಅಭಿಮಾನಿಗಳ ಸಾವಿಗೆ ಸರಕಾರ ನೈತಿಕ ಹೊಣೆಯಾಗಲಿ
ಕಲಬುರಗಿ: ಕಾಂಗ್ರೆಸ್ ಸರ್ಕಾರದ ಅವ್ಯವಸ್ಥೆಯಿಂದಾಗಿ ಹಲವಾರು ಅಮಾಯಕ ಆರ್.ಸಿ.ಬಿ ಅಭಿಮಾನಿಗಳ ಸಾವಾಗಿದೆ.ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವುದು ನಿಜಕ್ಕೂ ದುರಂತದ ವಿಷಯ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ ಅವರು ಸೂಕ್ತ ವ್ಯವಸ್ಥೆಗಳು, ಯೋಜನೆ ಮತ್ತು ಜನಸಂದಣಿಯ ನಿರ್ವಹಣೆ ಮಾಡದ ಪರಿಣಾಮ ಇಂತಹ ಹೃದಯವಿದ್ರಾವಕ ಘಟನೆ ನಡೆದಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ವಕ್ತಾರ ಆನಂದ ತೆಗನೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ನಡೆಯುತ್ತದೆ ಎಂದು ಗೊತ್ತಿದ್ದರೂ ಕೂಡ ರಾಜ್ಯ ಸರ್ಕಾರವು ಸರಿಯಾದ ರೂಪುರೇಷ ಹಾಗೂ ತಯಾರಿ ಮಾಡಿಕೊಳ್ಳದೇ ಇರುವುದು ಇಂತಹ ದುರಂತಕ್ಕೆ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರ ಮುನ್ನೆಚ್ಚರಿಕೆ ವಹಿಸಿದ್ದರೆ ಈ ದುರ್ಘಟನೆ ತಪ್ಪಿಸಬಹುದಿತ್ತು. ಆದರೆ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಮತ್ತು ಇದರ ಹೊಣೆಗಾರಿಕೆಯನ್ನು ಸರ್ಕಾರವೇ ಹೊರಬೇಕು ಎಂದು ಅವರು ಆಗ್ರಹಿಸಿದ್ದಾರೆ.