*101 ಸಸಿಗಳನ್ನು ನೆಡುವುದರೊಂದಿಗೆ ವಿಶ್ವ ಪರಿಸರ ದಿನಾಚರಣೆ*

*101 ಸಸಿಗಳನ್ನು ನೆಡುವುದರೊಂದಿಗೆ ವಿಶ್ವ ಪರಿಸರ ದಿನಾಚರಣೆ*

101 ಸಸಿಗಳನ್ನು ನೆಡುವುದರೊಂದಿಗೆ ವಿಶ್ವ ಪರಿಸರ ದಿನಾಚರಣೆ

ಕಲಬುರಗಿ-ಇಲ್ಲಿನ ಸೇಡಂ ರಸ್ತೆಯ ಭಾವಸಾರ ನಗರದಲ್ಲಿರುವ ಶ್ರೀ ಹಿಂಗುಲಾಂಬಿಕಾ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ* ದಿ-05-06-2025 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ನರೇಶ ತಾಂದಳೆ'ಯವರು ಸಸಿಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆಗೆ ಚಾಲನೆಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಆಡಳಿತಾಧಿಕಾರಿಗಳಾದ ಶ್ರೀ ಸುನೀಲ್ ಜಿಂದೆ, ಪ್ರಾಂಶುಪಾಲರಾದ ಡಾ.ಗೀತಾ.ಪಿ.ಮೋರೆ ಮೇಲ್ವಿಚಾರಕರಾದ ಶ್ರೀಮತಿ ಅರುಣಾ ಗಡಾಳೆ, ಎನ್ ಎಸ್ ಎಸ್ ಸಂಯೋಜನಾಧಿಕಾರಿಳಾದ ಶ್ರೀ ವಸಂತಕುಮಾರ್ ರಾಠೋಡ, ವ್ಯವಸ್ಥಾಪಕರಾದ ಶ್ರೀ ರಮೇಶ ಯಾಳಗಿ ಬೋಧಕ/ಬೋಧಕೇತರ ಸಿಬ್ಬಂದಿಗಳು ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.