ಡಿ.ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಹಿನ್ನೆಲೆ: ಎಸ್.ಕೆ.ಕಾಂತಾ ಅವರಿಗೆ ಸನ್ಮಾನ
ಡಿ.ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಹಿನ್ನೆಲೆ: ಎಸ್.ಕೆ.ಕಾಂತಾ ಅವರಿಗೆ ಸನ್ಮಾನ
ಕಲಬುರಗಿ: ಮಾಜಿ ಸಚಿವ ಎಸ್.ಕೆ.ಕಾಂತಾ ಅವರಿಗೆ ರಾಜ್ಯ ಸರ್ಕಾರವು 2024-25ನೇ ಸಾಲಿನ ರಾಜ್ಯ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಿ ಸರ್ಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಲಹೆಗಾರರು ಹಾಗೂ ಶಾಸಕ ಬಿ.ಆರ್.ಪಾಟೀಲ, ಶಾಸಕ ಅಲ್ಲಮಪ್ರಭು ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷ ಸುಭಾಷ ರಾಠೋಡ, ಮಾಜಿ ಸಚಿವ ರೇವೂನಾಯಕ ಬೇಳಮಗಿ, ಕಾಂಗ್ರೇಸ್ ಮುಖಂಡರಾದ ರಾಜಕುಮಾರ ಕಪನೂರ, ಲಚ್ಚಪ್ಪ ಜಮಾದಾರ ಅವರು ಕಲಬುರಗಿಯಲ್ಲಿನ ಎಸ್.ಕೆ.ಕಾಂತಾ ಅವರ ಮನೆಗೆ ಭೇಟಿ ನೀಡಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಅವರನ್ನು ಸನ್ಮಾನಿಸಿದರು.
ಆಗಸ್ಟ್ 20ರಂದು ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್. ಕೆ.ಕಾಂತಾ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡುವರು. ಡಿ.ದೇವರಾಜ ಅರಸು ಅವರತತ್ವ ಸಿದ್ದಾಂತ ಮತ್ತು ಆದರ್ಶಗಳನ್ನು ಮೈಗೂಡಿಸಿಕೊಂಡು ಅನುಷ್ಠಾನಕ್ಕೆ ತರಲು ಶ್ರಮಿಸುವವರಿಗೆ ಪ್ರತಿ ವರ್ಷ 5 ಲಕ್ಷ ರೂ. ಮೊತ್ತ ಮತ್ತು ಪ್ರಶಸ್ತಿ ಪತ್ರ ಒಳಗೊಂಡ ಈ ಪ್ರತಿಷ್ಟಿತ ಪ್ರಶಸ್ತಿ ರಾಜ್ಯ ಸರ್ಕಾರ ಕೊಡಮಾಡುತ್ತಿದೆ.