ಮೇಳಕುಂದಾ ಬಿ. ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಿಗೆ ಸನ್ಮಾನ

ಮೇಳಕುಂದಾ ಬಿ. ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಿಗೆ ಸನ್ಮಾನ

ಮೇಳಕುಂದಾ ಬಿ. ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಿಗೆ ಸನ್ಮಾನ

ಕಲಬುರಗಿ: ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದ ಮೇಳಕುಂದಾ ಬಿ. ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಣ್ಣಾರಾವ ಕೇರಮಗಿ ಅವರಿಗೆ ದಕ್ಷಿಣ ಕಾಂಗ್ರೆಸ್‌ನ ಹಿರಿಯ ಮುಖಂಡರಾದ ನೀಲಕಠರಾವ ಮೂಲಗೆ ಅವರು ಸನ್ಮಾನಿಸಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಗ್ರಾಮದ ಸಮುದಾಯ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದು, ನೂತನ ಅಧ್ಯಕ್ಷರ ಆಯ್ಕೆಗೆ ಹರ್ಷ ವ್ಯಕ್ತಪಡಿಸಿದರು. ಗ್ರಾಮಾಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುವ ಭರವಸೆಯನ್ನು ಅಧ್ಯಕ್ಷರು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.