ಬೆಂಗಳೂರಿನಿಂದ ಅಹಮದಾಬಾದ್‌ಗೆ ಇಂಡಿಗೋ ವಿಮಾನ ಹಾರಾಟ ರದ್ದು

ಬೆಂಗಳೂರಿನಿಂದ ಅಹಮದಾಬಾದ್‌ಗೆ ಇಂಡಿಗೋ ವಿಮಾನ ಹಾರಾಟ ರದ್ದು
ಬೆಂಗಳೂರು, ಜೂನ್ 13: ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ (AI171) ಪತನಗೊಂಡಿರುವ ಘಟನೆ ಹಿನ್ನೆಲೆಯಲ್ಲಿ, ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಾತ್ಕಾಲಿಕವಾಗಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ.
ಈ ಹಿನ್ನೆಲೆಯಲ್ಲಿ, ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಬೇಕಿದ್ದ ಇಂಡಿಗೋ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ, ಇತರ ವಿಮಾನಗಳ ಹಾರಾಟದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂಬುದಾಗಿ ಸ್ಪಷ್ಟಪಡಿಸಲಾಗಿದೆ.
ಈ ವಿಮಾನ ಅಪಘಾತದಲ್ಲಿ 241 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಮೇಘಾನಿ ನಗರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದ ತೀವ್ರತೆಯಿಂದಾಗಿ ವಿಮಾನ ನಿಲ್ದಾಣದ ನಿರ್ವಹಣೆಯು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂದು ಅಧಿಕಾರಿಗಳಿಗಳು ತಿಳಿಸಿದರು