ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಶಿಕ್ಷಕರ ಹುದ್ದೆ ಬರ್ತಿ : ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ

ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಶಿಕ್ಷಕರ ಹುದ್ದೆ ಬರ್ತಿ : ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ

ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಶಿಕ್ಷಕರ ಹುದ್ದೆ ಬರ್ತಿ : ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ

ಕಲಬುರಗಿ: ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ಪ್ರದೇಶವಾಗಿ ಗುರುತಿಸಲಾದ ಕಲ್ಯಾಣ ಕರ್ನಾಟಕಕ್ಕೆ ಇನ್ನಷ್ಟು ಅಭಿವೃದ್ಧಿ ಅಗತ್ಯವಿದೆ ಎಂದು ರಾಜ್ಯದ ಸಚಿವ ಶ್ರೀ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ 25ನೇ ವರ್ಷದ ರಾಜತ ಮಹೋತ್ಸವ ದಲ್ಲಿ ಮಾತನಾಡಿದ ಅವರು, ಧರ್ಮಸಿಂಗ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಅವರ ನಾಯಕತ್ವದಲ್ಲಿ 371(ಜೆ) ಕಲಂ ಜಾರಿಯಾದ್ದನ್ನು ಸ್ಮರಿಸಿದರು. ಈ ಕಲಂನ ಅನ್ವಯವಾಗಿ 2013ರಲ್ಲಿ ಎಸ್.ಎಂ. ಕೃಷ್ಣ ಅವರ ಆಡಳಿತದಲ್ಲಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (KKRDB) ಸ್ಥಾಪನೆಗೊಂಡಿತು ಎಂದು ಹೇಳಿದರು.

ಶಿಕ್ಷಣಕ್ಕೆ ಆದ್ಯತೆ:

ಈ ಭಾಗದ 41 ವಿಧಾನಸಭಾ ಕ್ಷೇತ್ರಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ. 10ನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಮೌಲ್ಯಮಾಪನದ ಮಟ್ಟ ತೃಪ್ತಿಕರವಾಗಿಲ್ಲ ಎಂದರು . ಗೌರವ ಶಿಕ್ಷಕರ ನೇಮಕ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ 25,000 ಶಿಕ್ಷಕರ ನೇಮಕಾತಿ ಮಾಡಲು ಸರ್ಕಾರ ಯೋಜನೆ ರೂಪಿಸಿದೆ ಎಂದು ಅವರು ತಿಳಿಸಿದರು.

ಆರೋಗ್ಯ ಸುಧಾರಣೆಗೆ ಹೆಜ್ಜೆ:

ಜನತೆಗೆ ಉತ್ತಮ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಜಯದೇವ ಹೃದಯ ಸಂಸ್ಥೆಯ ಶಾಖೆಯನ್ನು ಕಲ್ಯಾಣ ಕರ್ನಾಟಕದಲ್ಲಿ ಪ್ರಾರಂಭಸಲಾಗಿದೆ. ಇದರೊಂದಿಗೆ, ಬೀದರ್ ಜಿಲ್ಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉತ್ತಮ ಪಾಠ ನೀಡುವ ಸಲುವಾಗಿ ನುರಿತ ಶಿಕ್ಷಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.

75%ಕ್ಕಿಂತ ಹೆಚ್ಚು ಫಲಿತಾಂಶ ಗುರಿ:

ಈ ಭಾಗದ ವಿದ್ಯಾರ್ಥಿಗಳಿಂದ 75%ಕ್ಕಿಂತ ಹೆಚ್ಚು ಫಲಿತಾಂಶ ತರಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಹಸಿರುಗಾರಿಕೆ ಕಾರ್ಯಕ್ರಮ:

ರಾಜ್ಯಾದ್ಯಂತ 8 ಕೋಟಿ ಸಸಿಗಳನ್ನು ನೆಡುವ ಗುರಿಯೊಂದಿಗೆ, ಕಲ್ಯಾಣ ಕರ್ನಾಟಕದಲ್ಲಿ ಈಗಾಗಲೇ 30 ಲಕ್ಷ ಸಸಿಗಳನ್ನು ನೆಡಲಾಗಿದೆ. ಕಲಬುರಗಿಯಲ್ಲಿ ಶ್ರೀ ಮಲ್ಲಿಕಾರ್ಜುನ್ ಖರ್ಗೆ ಅವರ ಅಮೃತ ಹಸ್ತದಿಂದ ಎತ್ತರದ ಸಸಿಗಳನ್ನು ನೆಡುವ ಉದ್ದೇಶವಿದೆ. ಮುಂದಿನ ಹಂತದಲ್ಲಿ ಒಂದು ಕೋಟಿ ಸಸಿ ನೆಡುವ ಯೋಜನೆ ರೂಪುಗೊಳ್ಳಲಿದೆ ಎಂದು ಖಂಡ್ರೆ ತಿಳಿಸಿದ್ದಾರೆ.

ಅವರು ಕೊನೆಗೆ, “ಕಲ್ಯಾಣ ಕರ್ನಾಟಕದಲ್ಲಿ ಅರಣ್ಯ ಪ್ರದೇಶವು ಕಡಿಮೆಯಿರುವುದರಿಂದ ಪರಿಸರ ಸಮತೋಲನಕ್ಕಾಗಿ ಹಸಿರು ಅಭಿಯಾನ ಅಗತ್ಯವಾಗಿದೆ,” ಎಂಬುದನ್ನು ಸುದೃಢಪಡಿಸಿದರು.