ಜಿಲ್ಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ..
ಜಿಲ್ಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ..
ರಾಜ್ಯಪಾಲರ ನಡೆಗೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಕಲಬುರಗಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯದ ರಾಜ್ಯಪಾಲರ ಹುದ್ದೆಯಲ್ಲಿದ್ದುಕೊಂಡು ರಾಜಕೀಯ ಪ್ರೇರಿತವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಕೇಂದ್ರ ಸರಕಾರದ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಆಕ್ರೋಶವ್ಯಕ್ತಪಡಿಸಿದರು.
ರಾಜ್ಯದ ಜನತೆಗೆ ಜನಪರವಾದ ಆಡಳಿತ ನೀಡುತ್ತಾ, ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಬಿಜೆಪಿ ಎಜೆಂಟರಂತೆ ವರ್ತಿಸಿ ಪ್ರಾಸಿಕ್ಯೂಷನಗೆ ಅನುಮತಿ ನೀಡಿರುವ ಘನತೆವೆತ್ತ ರಾಜ್ಯಪಾಲರ ನಡೆ ಹಾಗೂ ಕೇಂದ್ರ ಬಿಜೆಪಿ ಸರಕಾರ ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ ಪಿತೂರಿಗೆ ಖಂಡಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹೊರಟು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷರಾದ ಜಗದೇವ ಗುತ್ತೇದಾರ, ಶಾಸಕರಾದ ಎಂ.ವೈ.ಪಾಟೀಲ್, ಅಲ್ಲಮಪ್ರಭು ಪಾಟೀಲ್, ರೇವುನಾಯಕ ಬೆಳಮಗಿ, ನೀಲಕಂಠರಾವ ಮೂಲಗೆ, ಮಜರ್ ಆಲಂಖಾನ್, ಡೆವಿಡ್ ಸಿಮಿಯೋನ್, ಫರಾಜ್ ಉಲ್ ಇಸ್ಲಾಂ, ಈರಣ್ಣ ಝಳಕಿ, ಶಿವು ಹೊನಗುಂಟಿ, ಲಚ್ಚಪ್ಪ ಜಮಾದಾರ, ಸುಭಾಷ ಪಂಚಾಳ, ಸುಭಾಷ ರಾಠೋಡ, ರಿತೇಶ ಗುತ್ತೇದಾರ ಇತರರಿದ್ದರು.