ದೊಡ್ಡಪ್ಪ ಅಪ್ಪ ವಸತಿ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಯೋಗ ದಿನಾಚಾರಣೆ

ದೊಡ್ಡಪ್ಪ ಅಪ್ಪ ವಸತಿ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಯೋಗ ದಿನಾಚಾರಣೆ
ನಗರದ ದೊಡ್ಡಪ್ಪ ಅಪ್ಪ ವಸತಿ ಪದವಿ-ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವಯೋಗ ದಿನದ ದಶಮಾನೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ ಯೋಗಪಟುಗಳಾದ ಶ್ರೀ.ಚನ್ನಮಲ್ಲೇಶ್ವರ ಯೋಗಕೇಂದ್ರದ ಶ್ರೀ ವೀರಭದ್ರಯ್ಯ ಮಠಪತಿ ಅವರು ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರು ಇದರಲ್ಲಿ ಭಾಗವಹಿಸಿದರು. ಶ್ರೀ ವೀರಭದ್ರಯ್ಯ ಮಠಪತಿ ಮಾತನಾಡಿ ಯೋಗದ ಮಹತ್ವವನ್ನು ತಿಳಿಸಿಕೊಟ್ಟರು. ಯೋಗದಿಂದ ಸಕಲ ರೋಗಗಳು ನಿವಾರಣೆಯಾಗಿ ಮನುಷ್ಯನಿಗೆ ಹೊಸ ಚೈತ್ಯನ್ಯ ಮೂಡುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ವಿನೋದಕುಮಾರ ಎಲ್. ಪತಂಗೆ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಹಾಜರಿದ್ದರು.