ಚಿಂಚೋಳಿ ಪೊಲೀಸ್ ವೃತ್ತದಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ದಿನ ಆಚರಣೆ

ಚಿಂಚೋಳಿ ಪೊಲೀಸ್ ವೃತ್ತದಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ದಿನ ಆಚರಣೆ 

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಬಸ್ ಡಿಪೋ ವರೆಗೆ ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ ನಡಿಗೆ

ಚಿಂಚೋಳಿ : ಕಲಬುರಗಿ ಜಿಲ್ಲಾ ಪೊಲೀಸ್ ಠಾಣೆ, ಉಪ ವಿಭಾಗ ಚಿಂಚೋಳಿ ವೃತ್ತ ವತಿಯಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಣೆ ಮಾಡಲಾಯಿತು. 

ಡಿವೈಎಸ್ಪಿ ಸಂಗಮನಾಥ ಹಿರೇಮಠ ಅವರ ನೇತೃತ್ವದಲ್ಲಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಬಸ್ ಡಿಪೋ ವರೆಗೆ ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ಬೃಹತ್ ಜಾಥಾ ಕೈಗೊಂಡು, ಮಾದಕ ದ್ರವ್ಯ ಸೇವನೆ ಆರೋಗ್ಯಕ್ಕೆ ಹಾನಿಕಾರವಾಗಿದೆ. ಇವುಗಳ ಸೇವನೆಯಿಂದ ಪ್ರತಿದಿನ ನಾಲ್ಕು ಜನರಲ್ಲಿ ಒಬ್ಬರು ಸಾವಿಗೆ ಶರಣಾಗುತ್ತಿದ್ದಾರೆ. ಹೀಗಾಗಿ ಉತ್ತಮ ಸಮಾಜಕ್ಕಾಗಿ ಮಾದಕ ದ್ರವ್ಯಗಳನ್ನು ಬಹಿಷ್ಕರಿಸಬೇಕೆಂದು, ಭೀತಿ ಪತ್ರಗಳನ್ನು ಪ್ರದರ್ಶಿಸುವ ಮೂಲಕ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಣೆಯ ಸದುದ್ದೇಶದ ಬಗ್ಗೆ ಜಾಥಾ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದರು.

ಈ ಸಂದರ್ಭದಲ್ಲಿ ಚಿಂಚೋಳಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಗಂಗಮ್ಮ, ಪೊಲೀಸ್ ಪೇದೆಗಳು ಹಾಗೂ ಶಾಲೆಯ ಶಿಕ್ಷಕರುಗಳು ಉಪಸ್ಥಿತರಿದರು.