"ಅಸ್ಪೃಶ್ಯತೆ ಎಂಬ ರೋಗವನ್ನು ನಿರ್ಮೂಲನೆ ಮಾಡಲು ನಾರಾಯಣಗುರುಗಳ ಪ್ರಯತ್ನ ಅವಿರತ"

"ಅಸ್ಪೃಶ್ಯತೆ ಎಂಬ ರೋಗವನ್ನು ನಿರ್ಮೂಲನೆ ಮಾಡಲು ನಾರಾಯಣಗುರುಗಳ ಪ್ರಯತ್ನ ಅವಿರತ"

"ಅಸ್ಪೃಶ್ಯತೆ ಎಂಬ ರೋಗವನ್ನು ನಿರ್ಮೂಲನೆ ಮಾಡಲು ನಾರಾಯಣಗುರುಗಳ ಪ್ರಯತ್ನ ಅವಿರತ"

'ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು' ಎಂಬ ಸಂದೇಶ ಸಾರಿದ ಮಹಾನ್ ವ್ಯಕ್ತಿ ಅವರೇ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳು..

ಅದ್ವೈತದ ಸಾರದಲ್ಲಿ ತಮ್ಮ ದಾರ್ಶನಿಕತೆಯನ್ನು ಪ್ರತಿಪಾದಿಸಿದ ನಾರಾಯಣ ಗುರುಗಳು, ಎಲ್ಲರನ್ನೂ ಒಂದಾಗಿ ಕಂಡರು. ಇರುವವನು ಒಬ್ಬನೇ ಪರಮಾತ್ಮ, ಒಂದೇ ತತ್ವ, ಒಂದೇ ಸತ್ಯ. ಎಲ್ಲವೂ ಒಂದೇ ಅಂದಮೇಲೆ ಭೇದ-ಭಾವವಿಲ್ಲ, ಮೇಲು ಕೀಳಿಲ್ಲ. ಎಲ್ಲರಲ್ಲಿರುವ ಪರಮಾತ್ಮ ಒಬ್ಬನೇ ಅಂದಮೇಲೆ, ಅಲ್ಲಿ ಮೇಲು ಕೀಳೆಂಬ ಮಾತೆಲ್ಲಿ ಎಂದು ಪ್ರಶ್ನಿಸಿದವರು ಗುರುಗಳು.

ಮಾನವೀಯತೆ ಮಲಗಿ, ಮೂಢನಂಬಿಕೆಗಳು ಎದ್ದಿದ್ದ ಕಾಲದಲ್ಲಿ ಮಹಾನ್‌ ಮನವತಾವಾದಿಯಾಗಿ ಸಮಾಜದ ಕಣ್ಣರಳಿಸಿದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣ ಗುರು. ವ್ಯಕ್ತಿ ಸತ್ತರೂ ಅವರು ಸಮಾಜಕ್ಕೆ ಸಾರಿದ ಸಾಮಾಜಿಕ ಹಾಗೂ ಮನವೀಯ ಮೌಲ್ಯಗಳು ಸಾಯಬಾರದು. ಅದು ಎಂದೆಂದಿಗೂ ಜೀವಂತ. ಇದು ನಾರಾಯಣ ಗುರುಗಳ ಚಿಂತನೆಯನ್ನು ನೋಡಿ ಹೇಳಿರುವ ಮಾತಿನಂತಿದೆ."

"ಅಸ್ಪೃಶ್ಯತೆ ಎಂಬ ರೋಗವನ್ನು ನಿರ್ಮೂಲನೆ ಮಾಡಲು ನಾರಾಯಣಗುರುಗಳ ಪ್ರಯತ್ನ ಅವಿರತ. ಇದಕ್ಕಾಗಿ ಇವರು ಕಂಡುಕೊಂಡ ಮಾರ್ಗ 'ಧರ್ಮ'. ರಾಜಕೀಯ ನಂಟಿನೊಂದಿಗೆ ಅರ್ಥಹೀನವಾಗಿರುವ ಧರ್ಮ ಎಂಬ ಪದವು, ನಾರಾಯಣ ಗುರುಗಳ ಆಧ್ಯಾತ್ಮದೊಂದಿಗೆ ಸೇರಿಕೊಂಡಾಗ ಅರ್ಥಗರ್ಭಿತ ಎಂದೆನಿಸಿಕೊಳ್ಳುತ್ತದೆ. ಸಮಾಜದಲ್ಲಿ ಮೇಲು-ಕೀಳುಗಳೆಂಬ ಕಷ್ಟಕೋಟೆಗಳು ದಮನಿತರನ್ನು ಜಡಿಯುತ್ತಿದ್ದಾಗ, ದೇವರಂತೆ ಬಂದವರು ಗುರುಗಳು.

ಶಂಕರಾಚಾರ್ಯರ ಅದ್ವೈತದ ಸಾರದಲ್ಲಿ ತಮ್ಮ ದಾರ್ಶನಿಕತೆಯನ್ನು ಪ್ರತಿಪಾದಿಸಿದ ನಾರಾಯಣ ಗುರುಗಳು, ಎಲ್ಲರನ್ನೂ ಒಂದಾಗಿ ಕಂಡರು. ಇರುವವನು ಒಬ್ಬನೇ ಪರಮಾತ್ಮ, ಒಂದೇ ತತ್ವ, ಒಂದೇ ಸತ್ಯ. ಎಲ್ಲವೂ ಒಂದೇ ಅಂದಮೇಲೆ ಭೇದ-ಭಾವವಿಲ್ಲ, ಮೇಲು ಕೀಳಿಲ್ಲ. ಎಲ್ಲರಲ್ಲಿರುವ ಪರಮಾತ್ಮ ಒಬ್ಬನೇ ಅಂದಮೇಲೆ, ಅಲ್ಲಿ ಮೇಲು ಕೀಳೆಂಬ ಮಾತೆಲ್ಲಿ ಎಂದು ಪ್ರಶ್ನಿಸಿದವರು ಗುರುಗಳು.

ಈ ವರ್ಷ ನಾರಾಯಣ ಗುರುಗಳ 170ನೇ ಜಯಂತಿ ಆಚರಿಸಲಾಗುತ್ತದೆ. ಕೇರಳದಲ್ಲಿ ಜನಿಸಿದ ಇವರು, ಬಾಲ್ಯದಲ್ಲೇ ಭವಿಷ್ಯದ ಸ್ಪಷ್ಟ ನಿಲುವು ಹೊಂದಿದ್ದರು. ಆ ಕಾಲದಲ್ಲಿ ‘ಮಡಿ'ಯ ವಿರುದ್ಧ ಕ್ರಾಂತಿಯನ್ನು ಹರಡಿದವರು. ಬ್ರಿಟೀಷ್‌ ಅರಸೊತ್ತಿಗೆ ಅಬ್ಬರದಿಂದ ಆಳುತ್ತಿದ್ದ ಕಾಲದಲ್ಲಿ, ಮಡಿವಂತಿಕೆಗೆ ಏನೂ ಕಮ್ಮಿ ಇರಲಿಲ್ಲ. ಮೂಢನಂಬಿಕೆ, ಜಾತೀಯತೆ, ಅಸ್ಪೃಶ್ಯತೆ, ದೇವದಾಸಿ ಪದ್ಧತಿ, ಬಾಲ್ಯವಿವಾಹ, ಗುಲಾಮಗಿರಿ, ಜೀತ ಪದ್ಧತಿ, ಜಮೀನ್ದಾರಿ ಪದ್ಧತಿ ಮೊದಲಾದ ಅನಿಷ್ಟ ಆಚರಣೆಗಳ ತಾಂಡವವಾಡುತ್ತಿದ್ದ ಕಾಲವದು. ಈದನ್ನೆಲ್ಲ ನೋಡಿ ಬೇಸತ್ತ ನಾರಾಯಣ ಗುರುಗಳು ಇದನ್ನು ಹಿಮ್ಮೆಟ್ಟುವಲ್ಲಿ ಮುಂದಡಿ ಇಟ್ಟರು.

ಸರಿಯಾದ ಸಮಯದಲ್ಲಿ ಸಂಸ್ಕೃತ ಅಭ್ಯಾಸ, ಪುರಾಣ ಜ್ಞಾನ, ರಾಮಾಯಣ ಸೇರಿದಂತೆ ಧರ್ಮಗ್ರಂಥಗಳ ಜ್ಞಾನ ಗುರುಗಳಿಗೆ ದೊರೆಯಿತು. ಕೇರಳದ ಕರುನಾಗಪಳ್ಳಿಯ ಚೆರುವನ್ನಾರ್‌ ಮನೆತನದ ಶ್ರೀರಾಮನ್‌ ಆಶಾನ್‌ ಎಂಬ ಗುರುಗಳಲ್ಲಿ ಅಗತ್ಯ ಶಿಕ್ಷಣವೂ ಸಿಕ್ಕಿತು. ಅಧ್ಯಾತ್ಮ, ಆಯುರ್ವೇದ, ಜ್ಯೋತಿಷ್ಯ ಶಾಸ್ತ್ರ, ವೇದ ಉಪನಿಷತ್, ಕಾವ್ಯ, ನಾಟಕ, ವ್ಯಾಕರಣ, ತರ್ಕಶಾಸ್ತ್ರ ಹೀಗೆ ಸಕಲ ವಿದ್ಯೆಗಳನ್ನೂ ಕಲಿತು ಆಧ್ಯಾತ್ಮದ ಗುರುವಾದರು. ಸಮಾಜದೊಂದಿಗೆ ಬೆರೆತು ಸಾಮಾನ್ಯನ ಬದುಕನ್ನು ಅರಿತು, ಬದುಕಿನ ಪಾಠ ಕಲಿತರು. ಸಾಮಾನ್ಯ 'ನಾಣು'‌ ಎಂಬ ಬಾಲಕನಾಗಿದ್ದವರು ಬ್ರಹ್ಮಜ್ಞಾನವನ್ನು ಪಡೆದು, ನಾರಾಯಣ ಗುರುವಾದರು." ಎಂದು ಹೆಸರು ವಾಸಿಯಾದರೂ..

ಕರಾವಳಿ ಭಾಗದ ಬಿಲ್ಲವರಿಗೆ ನಾರಾಯಣ ಗುರುಗಳು ಇಂದಿಗೂ ಆರಾಧ್ಯ ದೈವ. ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಹೋದವರಿಗೆ, ಅಥವಾ ಈ ದೇಗುಲದ ಹೆಸರು ಕೇಳಿದಾಗ ಗುರುಗಳ ನೆನಪಾಗದೆ ಇರದು. 1908ರಲ್ಲಿ ಕೇರಳದಿಂದ ಮಂಗಳೂರಿಗೆ ಬಂದ ನಾರಾಯಣ ಗುರುಗಳು ಸಾಹುಕಾರ ಕೊರಗಪ್ಪ ಎಂಬವರ ನೇತೃತ್ವದಲ್ಲಿ ಕುದ್ರೋಳಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಮುಂದದಾರು . ಗೋಕರ್ಣ ಕ್ಷೇತ್ರದಲ್ಲಿ ಬಿಲ್ಲವ ಜನಾಂಗದ ಹಿರಿಯರೊಬ್ಬರ ಸ್ವಾಭಿಮಾನಕ್ಕೆ ಬಂದ ಧಕ್ಕೆ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಸ್ಥಾಪನೆಗೆ ಕಾರಣವಾಯಿತು ಎನ್ನುವ ಇತಿಹಾಸವಿದೆ . ಸಾಮಾಜಿಕ ಸಮಸ್ಯೆಗಳೇ ಸಾಗರವಾಗಿದ್ದ ಆ ಕಾಲದಲ್ಲಿ ನಾರಾಯಣ ಗುರುಗಳ ಪ್ರಭಾವ ಕರಾವಳಿಯಲ್ಲಿ ಬೀರಿತು. ಈಗ ಇಲ್ಲಿ ಗಲ್ಲಿ ಗಲ್ಲಿಯಲ್ಲೂ, ಜಾತಿ ಧರ್ಮ ಮೀರಿ ಗುರುಗಳನ್ನು ಆರಾಧಿಸಲಾಗುತ್ತಿದೆ. ಇದು ಇವರ ಸಾಮಾಜಿಕ ಚಿಂತನೆಗೆ ಸಿಕ್ಕ ಮನ್ನಣೆ ಮತ್ತು ಗೌರವ ಎಂದು ಹೇಳಲಾಗುತ್ತದೆ.

ಜನರಲ್ಲಿ ಸ್ವಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣಕ್ಕೆ ಮಹತ್ವ ನೀಡಿದ ಗುರುಗಳು, ನೂರಾರು ಸಾವಿರಾರು ಜನರಿಗೆ ಶಿಕ್ಷಣ ಕೊಡಿಸಿದರು. ಎಲ್ಲ ವರ್ಗದ ಜನರು ಒಟ್ಟಿಗೆ ಕಲಿಯಬೇಕು ಎಂದು ಪ್ರೇರೇಪಿಸಿದರು. ಇಳವ ಸಮುದಾಯದದಲ್ಲಿ ಮಹಿಳೆಯರ ಶಿಕ್ಷಣಕ್ಕೆ ಒತ್ತು ನೀಡಿದರು.ಅದಕ್ಕಾಗಿ ಸೇವಾಟ್ರಸ್ಟ್‌, ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳನ್ನು ತೆರೆದರು. ದೇವಸ್ಥಾನಗಳಿಗೂ ಎಲ್ಲಾ ಜಾತಿ ಹಾಗೂ ವರ್ಗದ ಜನರಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಿದರು. ಅಂದರೆ ಜಾತಿ ಧರ್ಮವನ್ನು ಬದಿಗಿಟ್ಟು, ಗುರುಗಳು ಎಲ್ಲರನ್ನೂ ಒಂದಾಗಿ ಕಂಡರು. ಆ ಮೂಲಕ ಜನರು ಕೂಡಾ ಎಲ್ಲರನ್ನೂ ಒಂದಾಗಿ ಕಾಣುವಂತೆ ಸ್ಫೂರ್ತಿ ತುಂಬಿದರು.

ಇಂದು ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು ಎಂಬ ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀ ಜೀವನವನ್ನು ಮುಡಿಪಾಗಿಟ್ಟ ಬ್ರಹ್ಮಶ್ರೀನಾರಾಯಣ ಗುರುಗಳ ಜಯಂತಿ.

ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು. ಅವರು ಬೋಧಿಸಿದ್ದು, ದೇಶಸೇವೆಯೇ ಈಶ ಸೇವೆಯೆಂದು.

 “ಸಾಮಾಜಿಕ ಸುಧಾರಣೆಯ ಹರಿಕಾರ, ಸಂಘಟನೆಯಿಂದ ಬಲಿಷ್ಠರಾಗಿ, ವಿದ್ಯೆಯಿಂದ ಪ್ರಗತಿ ಹೊಂದಿ ಎಂಬ ಸಂದೇಶವನ್ನು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನದಂದು ಅವರಿಗೆ ಭಕ್ತಿಪೂರ್ವಕ ನಮನಗಳು. ಅವರ ಆದರ್ಶ ಮತ್ತು ಸಂದೇಶಗಳು ಸಮಾಜದ ಸರ್ವತೋಮುಖ ಪ್ರಗತಿಗೆ ಮಾದರಿಯಾಗಿದೆ.”ಎಂದು ಹೇಳುತ್ತಾ ಎಲ್ಲರಿಗೂ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ 

ಕಾಶಿಬಾಯಿ. ಸಿ. ಗುತ್ತೇದಾರ ಕಲಬುರಗಿ

ಮಾಧ್ಯಮ ಕ್ಷೇತ್ರ