ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಡಿ. ದೇವರಾಜ ಅರಸು ವಸತಿ ನಿಲಯಕ್ಕೆ ನೂತನ ನಿಲಯ ಪಾಲಕರು ನೇಮಕ

ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಡಿ. ದೇವರಾಜ ಅರಸು ವಸತಿ ನಿಲಯಕ್ಕೆ ನೂತನ ನಿಲಯ ಪಾಲಕರು ನೇಮಕ

ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಡಿ. ದೇವರಾಜ ಅರಸು ವಸತಿ ನಿಲಯಕ್ಕೆ ನೂತನ ನಿಲಯ ಪಾಲಕರು ನೇಮಕ

ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿಯ ಆವರಣದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸ್ನಾತಕೋತ್ತರ ವಿದ್ಯಾರ್ಥಿಗಳ ವಸತಿ ನಿಲಯದ ನೂತನ ನಿಲಯ ಪಾಲಕರಾಗಿ ಶ್ರೀ ವಿನೋದ್ ಕುಮಾರ್ ಸರ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಿಲಯದಲ್ಲಿ ಗೌರವ ಸನ್ಮಾನ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ವೇಳೆ ನಿಲಯದ ಅಧ್ಯಕ್ಷ ರಾಚಯ್ಯಸ್ವಾಮಿ ಹಿರೇಮಠ ಹಾಗೂ ಉಪಾಧ್ಯಕ್ಷ ಶಾಂತಕುಮಾರ್ ಉಪಸ್ಥಿತರಿದ್ದು, ನೂತನ ನಿಲಯ ಪಾಲಕರಿಗೆ ಹಾರೈಸಿದರು. ವಸತಿ ನಿಲಯದ ಎಲ್ಲಾ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಭಾಗಿಯಾಗಿ ಕಾರ್ಯಕ್ರಮಕ್ಕೆ ವಿಶಿಷ್ಟತೆಯನ್ನೂ ಒದಗಿಸಿದರು.

ನೂತನ ನಿಲಯ ಪಾಲಕರ ನೇಮಕವೊಂದು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವಸತಿ ಸೌಲಭ್ಯಗಳ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂಬ ನಂಬಿಕೆಯನ್ನು ವಿದ್ಯಾರ್ಥಿಗಳು ವ್ಯಕ್ತಪಡಿಸಿದ್ದಾರೆ.