ವಿವಿಧ ಕಾಮಗಾರಿಗಳ ಭೂಮಿ ಪೂಜೆಯನ್ನು ನೆರವೇರಿಸಿದ ಶಾಸಕ ಡಾ ಸಿದ್ದು ಪಾಟೀಲ

ವಿವಿಧ ಕಾಮಗಾರಿಗಳ ಭೂಮಿ ಪೂಜೆಯನ್ನು ನೆರವೇರಿಸಿದ ಶಾಸಕ ಡಾ ಸಿದ್ದು ಪಾಟೀಲ
ಚಿಟಗುಪ್ಪ: ಹುಮ್ನಾಬಾದ ಮತ್ತು
ಚಿಟಗುಪ್ಪ ತಾಲೂಕುಗಳನ್ನು ಅಭಿವೃದ್ಧಿ ಮಾಡುವುದೇ ನನ್ನ ಮುಖ್ಯ ಗುರಿ ಎಂದು ಕ್ಷೇತ್ರದ ಶಾಸಕ ಡಾ.ಸಿದ್ದು ಪಾಟೀಲ್ ಅವರು ಹೇಳಿದರು
ತಾಲೂಕಿನ ಕಂದಗೂಳ ಹಾಗೂ ತಾಳಮಡಗಿ ಗ್ರಾಮಗಳಲ್ಲಿ ಜರುಗಿದ ವಿವಿಧ ಕಾಮಗಾರಿಗಳ ಭೂಮಿ ಪೂಜೆಯನ್ನು ನೆರವೇರಿಸಿ, 2024-25ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಯೋಜನೆಡಿಯಲ್ಲಿ 02 ಕೋಟಿ ಅಧಿಕ ಅಂದಾಜು ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ,ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು ಈಗಾಗಲೇ ಕಂದಗೋಳ ಗ್ರಾಮದಿಂದ ಮಂಗಲಗಿ ಗ್ರಾಮಕ್ಕೆ ಹೋಗುವ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸಮುದಾಯ ಭವನ, ಸಿಸಿ ರಸ್ತೆ ಕಾಮಗಾರಿ ಕೆಲಸಗಳಿಗೆ ಅನುದಾನ ಮಂಜೂರು ಮಾಡಲಾಗಿದೆ. ಇನ್ನಿತರ ವಿವಿಧ ಯೋಜನೆಗಳ ಸೌಲಭ್ಯಗಳಿಗೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಈ ಭಾಗವನ್ನು ಸಂಪೂರ್ಣವಾಗಿ ಅಭಿವೃದ್ಧಿ ಮಾಡಲಾಗುವುದು. ಈ ನಿಟ್ಟಿನಲ್ಲಿ ನಿರಂತರವಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದೇವೆ.
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಅನುದಾನ ನೀಡಿ,ಈ ಭಾಗದ ಸರ್ವಾಂಗೀಣ ವಿಕಾಸಕ್ಕಾಗಿ ಹಗಲಿರುಳೆನ್ನದೆ ಶ್ರಮಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ, ಕೃಷಿ ಸಮಾಜದ ರಾಜ್ಯ ಪ್ರತಿನಿಧಿ ವಿಶ್ವನಾಥ ಪಾಟೀಲ, ಮುಖಂಡರಾದ ಸಂತೋಷ ಪಾಟೀಲ, ಶ್ರೀಮಂತ ಪಾಟೀಲ, ಜಗನ್ನಾಥ ದೇವಣಿ ಸೇರಿದಂತೆ ಗ್ರಾಮ ಪಂಚಾಯತ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ - ಸಂಗಮೇಶ ಎನ್ ಜವಾದಿ.