ಸದ್ಗುರು ದ್ರೋಣಾಚಾರ್ಯ ರಾಜ್ಯ ಪ್ರಶಸ್ತಿಗೆ ಶ್ರೀ ಸಿದ್ದಪ್ಪ ತಳ್ಳಳ್ಳಿ ಸೇಡಂರವರು ಆಯ್ಕೆ

ಸದ್ಗುರು ದ್ರೋಣಾಚಾರ್ಯ ರಾಜ್ಯ ಪ್ರಶಸ್ತಿಗೆ ಶ್ರೀ ಸಿದ್ದಪ್ಪ ತಳ್ಳಳ್ಳಿ ಸೇಡಂರವರು ಆಯ್ಕೆ
ಬೆಂಗಳೂರು: ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ.) ಕರ್ನಾಟಕದ ವತಿಯಿಂದ ನೀಡಲಾಗುವ ಸದ್ಗುರು ದ್ರೋಣಾಚಾರ್ಯ ರಾಜ್ಯ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕವಿ ಕೆರಳ್ಳಿ ಗುರುನಾಥರೆಡ್ಡಿ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಸಿದ್ದಪ್ಪ ತಳ್ಳಳ್ಳಿ ರವರು ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯನ್ನು ದಿನಾಂಕ 13-07-2025 ರಂದು ಬೆಂಗಳೂರು ನಗರದಲ್ಲಿ ಜರುಗುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್‌ನ ರಾಜ್ಯಾಧ್ಯಕ್ಷರಾದ ಡಾ. ಜಿ. ಶಿವಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ಸಿದ್ದಪ್ಪ ತಳ್ಳಳ್ಳಿಯವರು ಕನ್ನಡ ಸಾಹಿತ್ಯ ಪರಿಷತ್ ಸೇಡಂ ತಾಲೂಕಿನ ಅಧ್ಯಕ್ಷರಾಗಿ ಅನೇಕ ಸಾಹಿತ್ಯದ ಚಟುವಟಿಕೆ ಮಾಡಿದ್ದಾರೆ. ಅಲ್ಲದೆ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಶರಣರ ವಿಚಾರಗಳನ್ನು ಜನರ ಮನ ಮನಕ್ಕೆ ಮುಟ್ಟುವಂತೆ ಮಾಡಿದ್ದಾರೆ.
ಇವರು ಶಿಕ್ಷಣ, ಸಾಹಿತ್ಯ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಗಳಲ್ಲಿ ಸಲ್ಲಿಸಿದ ಅಮೂಲ್ಯ ಸೇವೆಗೆ ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.