ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯ – ಬಾಲಕಿ ಮೇಲೆ ಅತ್ಯಾಚಾರಕ್ಕೆ 20 ವರ್ಷ ಜೈಲು ಶಿಕ್ಷೆ

ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯ – ಬಾಲಕಿ ಮೇಲೆ ಅತ್ಯಾಚಾರಕ್ಕೆ 20 ವರ್ಷ ಜೈಲು ಶಿಕ್ಷೆ

ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯ – ಬಾಲಕಿ ಮೇಲೆ ಅತ್ಯಾಚಾರಕ್ಕೆ 20 ವರ್ಷ ಜೈಲು ಶಿಕ್ಷೆ

ಕೊಪ್ಪಳ: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯ ಮಾಡಿಕೊಂಡು ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತುಮಕೂರು ಜಿಲ್ಲೆ ಬೀರನಕಲ್ ಗ್ರಾಮದ ರಮೇಶ್ ಎಂ. ಎಂಬಾತನಿಗೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸೆಷೆನ್ಸ್ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ಹಾಗೂ ₹25,000 ದಂಡ ವಿಧಿಸಿ ಕಠಿಣ ತೀರ್ಪು ನೀಡಿದೆ.

ಈ ಕುರಿತು ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ಈ ತೀರ್ಪು ಪ್ರಕಟಿಸಿದ್ದಾರೆ. ಆರೋಪಿಯು 2023ರ ಅಕ್ಟೋಬರ್‌ನಲ್ಲಿ ಬಾಲಕಿಯ ತಾಯಿಯು ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಗೆ ಹೋಗಿ "ನಾವು ಮದುವೆಯಾಗೋಣ" ಎಂದು ನಂಬಿಸಿ, ಮನೆಯಲ್ಲಿಯೇ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆ ಸಂಬಂಧ ತನಿಖೆ ನಡೆಸಿದ ಮಹಿಳಾ ಠಾಣೆಯ ಇನ್‌ಸ್ಪೆಕ್ಟರ್ ಆಂಜಿನೇಯ ಡಿ.ಎಸ್. ಅವರು ನ್ಯಾಯಾಲಯಕ್ಕೆ ಪೂರಕವಾದ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ವಕೀಲರಾಗಿ ಗೌರಮ್ಮ ದೇಸಾಯಿ ವಾದ ಮಂಡಿಸಿ, ದೃಢವಾದ ಸಾಕ್ಷಾಧಾರಗಳನ್ನು ಸಲ್ಲಿಸಿದರು.

ಈ ತೀರ್ಪು ಬಾಲಕಿಯ ನ್ಯಾಯಕ್ಕಾಗಿ ನಡೆದ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂಬ ಉದಾಹರಣೆಯಾಗಿದೆ.