ಮಹಿಳೆಯರು ಸ್ವಾವಲಂಬಿಗಳಾಗಿ ಬೆಳೆಯಬೇಕು.

ಮಹಿಳೆಯರು ಸ್ವಾವಲಂಬಿಗಳಾಗಿ ಬೆಳೆಯಬೇಕು.

ಮಹಿಳೆಯರು ಸ್ವಾವಲಂಬಿಗಳಾಗಿ ಬೆಳೆಯಬೇಕು.

ಕಲ್ಯಾಣ ಕಹಳೆ ವಾರ್ತೆ

ಚಿಟಗುಪ್ಪ: ಮಹಿಳೆಯರು ಸ್ವಾವಲಂಬಿಗಳಾಗಿ ತಮ್ಮ ಬದುಕನ್ನು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ರೂಪಿಸಿಕೊಂಡು

ಬೆಳೆಯಬೇಕು ಎಂದು ತಾಳಮಡಗಿ ಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ವೈಜನಾಥ ಹೇಳಿದರು.

ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮನ್ನಾಎಖೇಳಿ ವಲಯದ ಮಂಗಲಗಿ ಬಿ ಗ್ರಾಮದಲ್ಲಿ ಹಮ್ಮಿಕೊಂಡ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಲಾದ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಬೀದಿ ನಾಟಕಗಳ ಪ್ರದರ್ಶನದಿಂದ ಜನರಲ್ಲಿ ಜಾಗೃತಿ ಮೂಡುತ್ತದೆ. ಈ ಮೂಲಕ ಮಹಿಳೆಯರ ಬಲವರ್ಧನೆ ಮಾಡುತ್ತಿರುವುದು ಶ್ರೇಷ್ಠ ಕೆಲಸವಾಗಿದೆ. ಈ ನಿಟ್ಟಿನಲ್ಲಿ ನಿರಂತರವಾಗಿ ಜನ ಜಾಗೃತಿ ಜಾಥಗಳು ಹಮ್ಮಿಕೊಂಡು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಮುಖಾಂತರ ಮಹಿಳೆಯರನ್ನು ಸದೃಢವಾಗಿ ಮಾಡುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಗಳು ನಾಡಿಗೆ ಮಾದರಿಯಾಗಿವೆ ಎಂದರು.

ಈ ಸಂದರ್ಭದಲ್ಲಿ ಶೃತಿ ಕಲಾತಂಡದ ಸದಸ್ಯರು ಬೀದಿ ನಾಟಕ ಪ್ರದರ್ಶಿಸಿ, ಪರಿಸರ ಸ್ವಚ್ಛತೆ, ಶೌಚಾಲಯ ಬಳಕೆ ಕುರಿತಂತೆ ಗ್ರಾಮಸ್ಥರಲ್ಲಿ ಹಾಗೂ ವಿಶೇಷವಾಗಿ ಮಹಿಳೆಯರಲ್ಲಿ ಜಾಗೃತಿ ಮೂಡಿಸಿದರು.

ತಾಲೂಕಿನ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕಿನ ಕೃಷಿ ಮೇಲ್ವಿಚಾರಕ ಸಿದ್ದು ಪೂಜಾರಿ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಉಪಾಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು, ಜ್ಞಾನ ವಿಕಾಸ್ ಸಮನ್ವಯ ಅಧಿಕಾರಿಗಳು, ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು,ಗಣ್ಯರು,ಸಂಘದ ಸದಸ್ಯರು, ಮಾತೆಯರು ಉಪಸ್ಥಿತರಿದ್ದರು.

ವರದಿ - ಸಂಗಮೇಶ ಎನ್ ಜವಾದಿ.