ಹೃದಯಾಘಾತ ಪ್ರಕರಣಗಳ ಬಗ್ಗೆ ಸಾರ್ವಜನಿಕರಿಗೆ ಆತಂಕವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸೇಡಂ ಪಾಟೀಲ

ಹೃದಯಾಘಾತ ಪ್ರಕರಣಗಳ ಬಗ್ಗೆ ಸಾರ್ವಜನಿಕರಿಗೆ ಆತಂಕವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸೇಡಂ ಪಾಟೀಲ

ಹೃದಯಾಘಾತ ಪ್ರಕರಣಗಳ ಬಗ್ಗೆ ಸಾರ್ವಜನಿಕರಿಗೆ ಆತಂಕವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸೇಡಂ ಪಾಟೀಲ 

ಬೆಂಗಳೂರು, ಜುಲೈ 15: ರಾಜ್ಯದಲ್ಲಿ ವರದಿಯಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಸಾರ್ವಜನಿಕರಲ್ಲಿ ಆತಂಕ ಮತ್ತು ಗೊಂದಲ ಹರಡಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶ್ರೀ ಶರಣಪ್ರಕಾಶ ಪಾಟೀಲ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, “ಹೃದಯಾಘಾತ ಪ್ರಕರಣಗಳಿಂದ ಯಾರೂ ಭಯಪಡಬೇಕಾದ ಅಗತ್ಯವಿಲ್ಲ. ಬದಲಿಗೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು, ಸಮತೋಲನ ಆಹಾರ, ನಿದ್ರೆ ಹಾಗೂ ವ್ಯಾಯಾಮದ ಅಭ್ಯಾಸ ಜೀವನಶೈಲಿಯಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯ,” ಎಂದು ತಿಳಿಸಿದರು.

ಹಾಸನ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗುತ್ತಿದ್ದರೂ, ಸಾರ್ವಜನಿಕರು ಅತಿಯಾಗಿ ಆತಂಕಗೊಂಡು ಆಸ್ಪತ್ರೆಗಳಿಗೆ ಓಡುವ ಅಗತ್ಯವಿಲ್ಲ ಎಂದೂ ಸಚಿವರು ಹೇಳಿದರು. “ಲಘು ರೋಗ ಲಕ್ಷಣಗಳು ಕಂಡುಬಂದರೆ ಮಾತ್ರ ವೈದ್ಯರನ್ನು ಸಂಪರ್ಕಿಸಬೇಕು,” ಎಂದು ಸಲಹೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಡಾ. ಕೆ.ಎಸ್. ರವೀಂದ್ರನಾಥ (ಜಯದೇವ ಆಸ್ಪತ್ರೆ) ಅವರು, "ಹೃದಯಾಘಾತ ಹಾಗೂ ಕೋವಿಡ್ ಲಸಿಕೆಗೆ ಯಾವುದೇ ನೇರ ಸಂಬಂಧವಿಲ್ಲವೆಂಬುದು ಈಗಾಗಲೇ ಪ್ರಾಥಮಿಕ ವರದಿಗಳಿಂದ ಸಾಬೀತಾಗಿದೆ," ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಮೊಹಮ್ಮದ್ ಮೋಷಿನ್,ಆರೋಗ್ಯ ಇಲಾಖೆ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಥೋಡ್ ಸಹ ಉಪಸ್ಥಿತರಿದ್ದರು