ಕರ್ನಾಟಕ ರಾಜ್ಯ ಮಾದಿಗ ಸಮಾಜದ ಸಂಘಟನೆಯ ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ

ಕರ್ನಾಟಕ ರಾಜ್ಯ ಮಾದಿಗ ಸಮಾಜದ ಸಂಘಟನೆಯ ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ
ಕಲಬುರಗಿ: ಮಾದಿಗ ಸಮಾಜದ ಮಾಜಿ ಸಚಿವರಾದ ಹೆಚ್. ಆಂಜನೇಯ ಅವರಿಗೆ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಹಾಗೂ ಜೇವರ್ಗಿ ತಾಲೂಕಿನ ಹರವಾಳ ಗ್ರಾಮದ ಮಾದಿಗ ಸಮಾಜದ ಯುವಕ ಕೊಲೆ ಆರೋಪಗಳನ್ನು ಬಂಧಿಸುವAತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ಮಾದಿಗ ಸಮಾಜದ ಸಂಘಟನೆಯ ಜಿಲ್ಲಾ ಘಟಕದ ವತಿಯಿಂದ ನಗರದ ಎಸ್ ವಿ ಪಿ ವೃತ್ತದಿಂದ ಡಿಸಿ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ನಡೆಸಿದ ಮಾದಿಗ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಮಾದಿಗ ಸಮಾಜದ ಮಾಜಿ ಸಚಿವರಾದ ಹೆಚ್. ಆಂಜನೇಯ ಅವರಿಗೆ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಹಾಗೂ ಜೇವರ್ಗಿ ತಾಲೂಕಿನ ಹರವಾಳ ಗ್ರಾಮದ ಮಾದಿಗ ಸಮಾಜದ ಯುವಕ ದೌಲಪ್ಪ ಕೊಲೆ ಆರೋಪಗಳನ್ನು ಬಂಧಿಸಬೇಕು ಹಾಗೂ ಪ್ರಕರಣ ಭೇದಿಸುವಲ್ಲಿ ವಿಫಲರಾದ ಪೋಲಿಸ್ ಅಧಿಕಾರಿಗಳನ್ನು ಅಮಾನತ್ತು ಮಾಡುವಂತೆ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕೆ.ಆರ್.ಎಂ.ಎಸ್ ವಿಭಾಗಿಯ ಅಧ್ಯಕ್ಷ ಚಂದ್ರಕಾAತ ನಾಟೀಕರ್, ಕೆ.ಆರ್.ಎಂ.ಎಸ್ ಜಿಲ್ಲಾಧ್ಯಕ್ಷ ಸಿದ್ದಲಿಂಗ ಕಟ್ಟಿಮನಿ, ರಂಜಿತ ಮೂಲಿಮನಿ, ಮಲ್ಲಿಕಾರ್ಜುನ ಚಟ್ನಳ್ಳಿ, ಸುಂದರ ಸಾಗರ್, ಸುನೀತಾ ಎಮ್, ಮಹಾದೇವ್ ಕೌವಲಿ, ಕಂಠಪ್ಪ ಮಾಸ್ತರ, ಜೈರಾಜ ಕಿಣಗಿಕರ್, ಆನಂದ ತೇಗನೂರ, ನಾಗರಾಜ ಸೇರಿದಂತೆ ಅನೇಕರು ಭಾಗವಹಿಸಿದ್ದರು.