ನ್ಯಾಯ ಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.

ನ್ಯಾಯ ಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.

ನ್ಯಾಯ ಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.

ಚಿಟಗುಪ್ಪ: ಸರ್ಕಾರದ ನಿಯಮದಂತೆ ಕೆಲಸ ನಿರ್ವಹಣೆ ಮಾಡುವಲ್ಲಿ ಉದಾಸೀನತೆ ಮಾಡುತ್ತಿರುವ ತಾಲೂಕಿನ ನ್ಯಾಯ ಬೆಲೆ ಅಂಗಡಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕನ್ನಡ ಸೇನೆ ರಾಜ್ಯ ಉಪಾಧ್ಯಕ್ಷ ರವಿ ಸ್ವಾಮಿ ನೀರ್ಣಾ ಆಗ್ರಹಿಸಿದರು. 

ನಗರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು ತಾಲೂಕಿನಲ್ಲಿರುವ ನ್ಯಾಯಬೆಲೆ ಅಂಗಡಿಗಳು ಸಮಯಕ್ಕೆ ಸರಿಯಾಗಿ ಆರಂಭವಾಗುತ್ತಿಲ್ಲ. ಅವರು ಮನಬಂದಂತೆ ಅಂಗಡಿಗಳು ನಡೆಸುತ್ತಿದ್ದಾರೆ.

ಸರಕಾರದ ನಿಯಮಗಳು ಸರಿಯಾಗಿ ಪಾಲಿಸುತ್ತಿಲ್ಲ. ಬಡ ಜನರಿಗೆ ಬಹಳಷ್ಟು ತೊಂದರೆ ಮಾಡುತ್ತಿದ್ದಾರೆ. 

ಸರಕಾರದ ನಿಯಮದಂತೆ ಕೆಲಸ ನಿರ್ವಹಣೆ ಮಾಡಬೇಕು. ಒಂದು ವೇಳೆ ಸರ್ಕಾರದ ನಿಯಮಗಳು ಪಾಲಿಸದೆ ಹೋದಲ್ಲಿ ಅಂತಹ ನ್ಯಾಯಬೆಲೆ ಅಂಗಡಿಗಳನ್ನು ಈ ತಕ್ಷಣವೇ ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. 

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಪವನ ಪೂಜಾರಿ ಸೇರಿದಂತೆ ಕನ್ನಡ ಸೇನೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ - ಸಂಗಮೇಶ ಎನ್ ಜವಾದಿ.