ಸಂಗೊಳ್ಳಿ ರಾಯಣ್ಣನಿಗೆ ಅವಮಾನ ಕಿಡಿಗೇಡಿಗಳ ಬಂಧನಕ್ಕೆ ತಿಪ್ಪಣ್ಣ ಖ್ಯಾತನಾಳ ಆಗ್ರಹ.
ಸಂಗೊಳ್ಳಿ ರಾಯಣ್ಣನಿಗೆ ಅವಮಾನ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ.
ಶಹಪುರ: ದೇಶಾಭಿಮಾನಿ,ಸ್ವಾಭಿಮಾನಿ, ಕೆಚ್ಚೆದೆಯ ವೀರ ಸಂಗೊಳ್ಳಿ ರಾಯಣ್ಣನಿಗೆ ಅವಮಾನಿಸಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಶ್ರೀ ಕನಕದಾಸ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ತಿಪ್ಪಣ್ಣ ಖ್ಯಾತನಾಳ ಆಗ್ರಹಿಸಿದ್ದಾರೆ.
ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಹಗರಗುಂಡ ಗ್ರಾಮದಲ್ಲಿ ನಿನ್ನೆ ರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ, ಇಂತಹ ಬುದ್ಧಿಹೀನ ಕಿಡಿಗೇಡಿಗಳಿಗೆ ಕಾನೂನಾತ್ಮಕವಾಗಿ ಸೂಕ್ತ ಕಠಿಣ ಕಾನೂನು ಕ್ರಮ ಜರುಗಿಸಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಈ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಈ ನಾಡಿನ ಜನರ ಒಳಿತಿಗಾಗಿ ಶ್ರಮಿಸಿದ ಮಹಾನ್ ಪುರುಷರಿಗೆ ಅವಮಾನ ಮಾಡಿದ್ದು ಸರಿಯಲ್ಲ ಅಲ್ಲದೆ ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶದಿಂದ ಈ ಕೃತ್ಯ ಎಸಿಗಿದ್ದಾರೆ ಕೂಡಲೇ ದುಷ್ಕರ್ಮಿಗಳಿಗೆ ಬಂಧಿಸಿ ರಾಜ್ಯದಿಂದಲೇ ಗಡಿಪಾರು ಮಾಡಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.