ಪಾಳಾ ಗ್ರಾಮ ಅಭಿವೃದ್ಧಿಗೆ ಅನುದಾನ ಮಂಜೂರಾತಿಗಾಗಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಮನವಿ

ಪಾಳಾ ಗ್ರಾಮ ಅಭಿವೃದ್ಧಿಗೆ ಅನುದಾನ ಮಂಜೂರಾತಿಗಾಗಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಮನವಿ

ಪಾಳಾ ಗ್ರಾಮ ಅಭಿವೃದ್ಧಿಗೆ ಅನುದಾನ ಮಂಜೂರಾತಿಗಾಗಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಮನವಿ

ಕಲಬುರಗಿ:ಪಾಳಾ ಗ್ರಾಮದ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯವಿರುವ ಅನುದಾನವನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳುವಂತೆ ಸಚಿವ ಸನ್ಮಾನ್ಯ ಪ್ರಿಯಾಂಕ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂಬಂಧ ನಡೆದ ಭೇಟಿಯಲ್ಲಿ ಪತ್ರಕರ್ತ ಶರಣಗೌಡ ಪಾಟೀಲ ಪಾಳಾ, ಸಣ್ಣೂರಿನ ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ್ ಪೂಜಾರಿ ಹಾಗೂ ಮಾಪಣ್ಣ ತಳಕೇರಿ ಉಪಸ್ಥಿತರಿದ್ದರು. ಪಾಳಾ ಗ್ರಾಮದಲ್ಲಿ ರಸ್ತೆ, ಕುಡಿಯುವ ನೀರು, ಚರಂಡಿ ವ್ಯವಸ್ಥೆ, ಬೀದಿ ಬೆಳಕು ಮುಂತಾದ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಕೈಗೊಳ್ಳಬೇಕೆಂಬ ಬೇಡಿಕೆಯನ್ನು ಈ ವೇಳೆ ಮಂಡಿಸಲಾಯಿತು.

ಸಮಾಜದ ಆಕಾಂಕ್ಷೆಗಳನ್ನು ಸ್ಪಷ್ಟಪಡಿಸಿ, ಗ್ರಾಮೀಣ ಭಾಗದ ಜನರ ದಿನನಿತ್ಯದ ತೊಂದರೆಗಳನ್ನು ನಿವಾರಿಸುವ ದೃಷ್ಟಿಯಿಂದ ಈ ಕಾಮಗಾರಿಗಳಿಗೆ ಅನುದಾನ ಒದಗಿಸಲು ವಿನಂತಿಸಲಾಯಿತು. ಈ ಸಂಬಂಧ ಸಚಿವರು ಸ್ಪಂದಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.