ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 42 ಸಾವಿರ ಕ್ಯುಸೆಕ್ ನೀರು ಬಿಡುಗಡೆ – ಬಿ. ಫೌಜಿಯಾ ತರನ್ನುಮ್ ಎಚ್ಚರಿಕೆ –

ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 42 ಸಾವಿರ ಕ್ಯುಸೆಕ್ ನೀರು ಬಿಡುಗಡೆ – ಬಿ. ಫೌಜಿಯಾ ತರನ್ನುಮ್ ಎಚ್ಚರಿಕೆ –

ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 42 ಸಾವಿರ ಕ್ಯುಸೆಕ್ ನೀರು ಬಿಡುಗಡೆ, ಬಿ. ಫೌಜಿಯಾ ತರನ್ನುಮ್ ಎಚ್ಚರಿಕೆ 

ಕಲಬುರಗಿ: ಮಹಾರಾಷ್ಟ್ರದ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 42 ಸಾವಿರ ಕ್ಯುಸೆಕ್ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉಜ್ಜನಿ ಮತ್ತು ವೀರ್ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬಂದರೆ, ಭವಿಷ್ಯದಲ್ಲಿ ಭೀಮಾ ನದಿಗೆ ಹಾಗೂ ಬೆಣ್ಣೆತೋರಾ ಜಲಾಶಯದ ಮೂಲಕ ಕೆಳಪಾತ್ರದ ಕಡೆಗೂ ನೀರು ಬಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕರು ನದಿ ದಂಡೆಗಳಲ್ಲಿ ಹೋಗುವುದು ತಪ್ಪಿಸಿ, ಸುರಕ್ಷಿತ ಸ್ಥಳದಲ್ಲೇ ಇರುವಂತೆ, ಯಾವುದೇ ಅನಾಹುತಗಳನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಮನವಿ ಮಾಡಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ವಿಭಾಗದ ಮೂಲಕ ನಿರಂತರ ಗಮನ ವಹಿಸಲಾಗುತ್ತಿದ್ದು, ಅಗತ್ಯವಿರುವ ಸ್ಥಳಗಳಲ್ಲಿ ಎಚ್ಚರಿಕಾ ಸೂಚನೆಗಳು ಜಾರಿಗೊಳಿಸಲಾಗಿದೆ.