ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಪೌಷ್ಠಿಕ ಆಹಾರ ರಾಮಬಾಣ: ಸಂಗಮೇಶ ಎನ್ ಜವಾದಿ.

ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಪೌಷ್ಠಿಕ ಆಹಾರ ರಾಮಬಾಣ: ಸಂಗಮೇಶ ಎನ್ ಜವಾದಿ.

ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಪೌಷ್ಠಿಕ ಆಹಾರ

ರಾಮಬಾಣ: ಸಂಗಮೇಶ ಎನ್ ಜವಾದಿ.

ಚಿಟಗುಪ್ಪ: ಪೌಷ್ಠಿಕ ಆಹಾರಜೀವಕೋಶಗಳಿಗೆ ಮತ್ತು ಜೀವಿಗಳಿಗೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುವ ಆಹಾರವಾಗಿದೆ. ಇದು ಆರೋಗ್ಯಕರ ಜೀವನಶೈಲಿಯ ಪ್ರಮುಖ ಭಾಗ. ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಪೌಷ್ಠಿಕ ಆಹಾರರಾಮಬಾಣವಾಗಿ ಮಾನವರಿಗೆ ಸಹಾಯ ಮಾಡುತ್ತದೆ ಎಂದು ಪರಿಸರವಾದಿ, ಸಾಹಿತಿ, ಸಾವಯವ ಕೃಷಿ ಪರಿವಾರದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮೇಶ ಎನ್ ಜವಾದಿ ಹೇಳಿದರು.

ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನ ವಿಕಾಸ ವಿಭಾಗದ ಅಡಿಯಲ್ಲಿ ಹಮ್ಮಿಕೊಂಡ ಪೌಷ್ಠಿಕ ಆಹಾರದ 

ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು ಪೌಷ್ಠಿಕ ಆಹಾರವು ದೇಹದ ಬೆಳವಣಿಗೆ, ಕಾರ್ಯನಿರ್ವಹಣೆ ಮತ್ತು ದುರಸ್ತಿಗಾಗಿ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ.ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಗೋಧಿ, ಅಕ್ಕಿ, ಜೋಳ, ಬೇಳೆಕಾಳುಗಳು,

ಹಸಿರು ಎಲೆಗಳ ತರಕಾರಿಗಳು, ಹಣ್ಣುಗಳು, ಬೇರು ತರಕಾರಿಗಳು, ಧಾನ್ಯಗಳು, ಬೀಜಗಳು 

ಹಾಲು, ಮೊಸರು ಪ್ರತಿದಿನವೂ ಬಳಸಬೇಕು. ನಿಯಮಿತವಾಗಿ ಸಮತೋಲಿತ ಆಹಾರವನ್ನು ಸೇವಿಸಬೇಕು. ಹೆಚ್ಚಾಗಿ ಸಾವಯವ ಕೃಷಿಯಲ್ಲಿ ಬೆಳೆದ ಆಹಾರ ಧಾನ್ಯಗಳು ಉಪಯೋಗಿಸಿದರೆ ಆರೋಗ್ಯಕ್ಕೆ ಉತ್ತಮ.

ಕಡ್ಡಾಯವಾಗಿ ಆಹಾರ ತಜ್ಞರ ಸಲಹೆ ಪಡೆಯುವುದು ಒಳ್ಳೆಯದು. ಒಟ್ಟಾರೆ ಪೌಷ್ಠಿಕ ಆಹಾರ ಸೇವನೆಯು ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಅತ್ಯುತ್ತಮ ಆಹಾರವಾಗಿದೆ. ಇದರಿಂದ ಆರೋಗ್ಯಕರ ಜೀವನ ನಡೆಸಬಹುದು ಎಂದು ತಿಳಿಸಿದರು.

ತಾಲೂಕಿನ ಯೋಜನಾಧಿಕಾರಿ ವೀರೇಶ್ ಮಾತನಾಡಿ ಪ್ರತಿ ವ್ಯಕ್ತಿಗೆ ಬಾಲ್ಯದಿಂದ ವೃದ್ಧಾಪ್ಯದವರೆಗೂ ಪೌಷ್ಠಿಕ ಆಹಾರದ ಅವಶ್ಯಕತೆ ಇದೆ. ಅದರಲ್ಲಿಯೂ ಮಹಿಳೆಯರಿಗೆ ಹೆಚ್ಚಿನ ಪೋಷಕಾಂಶಗಳ ಅಗತ್ಯತೆ ಇರುತ್ತದೆ. ನಮ್ಮ ದೇಹಕ್ಕೆ ಬೇಕಾಗುವಷ್ಟು ಆಹಾರ ಸೇವನೆ ಮಾಡದಿದ್ದರೆ ಕೆಲಸ ಮಾಡಲು ಮತ್ತು ಓಡಾಡಲು ಶಕ್ತಿ ಇರುವುದಿಲ್ಲ. ದೇಹದ ಅಂಗಾಂಗಗಳು ಬೆಳವಣಿಗೆಯಾಗಲು ಮತ್ತು ಸುಸ್ಥಿತಿಯಲ್ಲಿರಲು ಪೌಷ್ಠಿಕ ಆಹಾರದ ಅಗತ್ಯ ಇಂದಿನ ದಿನಗಳಲ್ಲಿ ಬಹಳಷ್ಟು ಇದೆ. ನವಣೆ, ಸಜ್ಜೆ, ಜೋಳ, ರಾಗಿ, ಹಸಿರು ತರಕಾರಿಗಳು ದಿನನಿತ್ಯವೂ ಹೆಚ್ಚಾಗಿ ಬಳಸಬೇಕು.

ಈ ನಿಟ್ಟಿನಲ್ಲಿ ಪೌಷ್ಠಿಕ ಆಹಾರ ಬಳಸಿಕೊಳ್ಳುವ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವು ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ಮಾಡುತ್ತಿದೆ. ಅದರಲ್ಲಿಯೂ ವಿಶೇಷವಾಗಿ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಮಾಹಿತಿ ನೀಡುವ ಕೆಲಸ ಮಾಡುತ್ತಿದ್ದೇವೆ.

ಈ ಮೂಲಕ ಸಮಾಜದಲ್ಲಿ ಇರುವ ಅದೆಷ್ಟು ಜನರು ಅಪೌಷ್ಠಿಕ ಆಹಾರದ ಬಗ್ಗೆ ಸರಿಯಾದ ಮಾಹಿತಿ ಕೊರತೆ ಆನಾರೋಗ್ಯದ ಕಾರಣದಿಂದ

ಬಳಲುತ್ತಿದ್ದವರಿಗೆ ಮಾಹಿತಿ ನೀಡುವ ಮುಖಾಂತರ ಅವರ ಬಾಳಿಗೆ ಚೈತನ್ಯವನ್ನು ತುಂಬುವಂತ ಕೆಲಸ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದು ಹೇಳಿದರು.

ಆರೋಗ್ಯ ಇಲಾಖೆ ಆಪ್ತ ಸಮಾಲೋಚನಾ ಅಧಿಕಾರಿ ಗೀತಾ ಮಾತನಾಡಿ ಆಹಾರದ ಅಪೌಷ್ಠಿಕಾಂಶದ ಕೊರತೆಯಿಂದಾಗಿ ಹಲವು ರೋಗಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ. ಇತ್ತಿಚಿನ ದಿನಗಳಲ್ಲಿ ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಂಡು ಬರುತ್ತಿದೆ. ಪ್ರತಿದಿನ ತರಕಾರಿ, ಹಣ್ಣುಗಳು ಕಡ್ಡಾಯವಾಗಿ ಸೇವಿಸಬೇಕು.ಮಹಿಳೆಯರು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪ್ಲಾಸ್ಟಿಕ್ ಬಳಸಬಾರದು, ಆರೋಗ್ಯದ ಸಮಸ್ಯೆಗಳು ಕಂಡರೆ ತಕ್ಷಣವೇ ವೈದ್ಯರನ್ನು ಕಾಣಬೇಕು. ಆರೋಗ್ಯದ ಕಡೆಗೆ ಹೆಚ್ಚಾಗಿ ಗಮನ ನೀಡಬೇಕೆಂದು ತಿಳಿಸಿದರು.

ಜ್ಞಾನ ವಿಕಾಸ ಸಮನ್ವಯಧಿಕಾರಿ ಶೋಭಾ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ನಾಗಶೆಟ್ಟಿ ಡೋರನಳ್ಳಿ ವಂದಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟ ಅಧ್ಯಕ್ಷರಾದ ಶಾಂತಾ ಆನಂದರಾಜ, ಸೇವಾ ಪ್ರತಿನಿಧಿ ಪಲ್ಲವಿ ಪಾಟೀಲ ಸೇರಿದಂತೆ ಸ್ವ ಸಹಾಯ ಸಂಘಗಳ ಪದಾಧಿಕಾರಿಗಳು, ಮಾತೆಯರು, ಗಣ್ಯರು,ವಿಧ್ಯಾರ್ಥಿಗಳು ಹಾಜರಿದ್ದರು. 

ಆರೋಗ್ಯಕರ ಆಹಾರವು ಎಲ್ಲಾ ರೀತಿಯ ಅಪೌಷ್ಟಿಕತೆಯಿಂದ ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ, ಜೊತೆಗೆ ಮಧುಮೇಹ, ಹೃದ್ರೋಗ, ಪಾರ್ಶ್ವವಾಯು ಮತ್ತು ಕ್ಯಾನ್ಸರ್ ಸೇರಿದಂತೆ ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ರಕ್ಷಿಸುತ್ತದೆ.

-