ಡಿ.ದೇವರಾಜ ಅರಸು ಪ್ರಶಸ್ತಿ ಆಯ್ಕೆ ಸಮಿತಿಗೆ ಲಕ್ಷ್ಮಣ್ ದಸ್ತಿ ಸದಸ್ಯರಾಗಿ ನೇಮಕ

ಡಿ.ದೇವರಾಜ ಅರಸು ಪ್ರಶಸ್ತಿ ಆಯ್ಕೆ ಸಮಿತಿಗೆ ಲಕ್ಷ್ಮಣ್ ದಸ್ತಿ ಸದಸ್ಯರಾಗಿ ನೇಮಕ

ಡಿ.ದೇವರಾಜ ಅರಸು ಪ್ರಶಸ್ತಿ ಆಯ್ಕೆ ಸಮಿತಿಗೆ ಲಕ್ಷ್ಮಣ್ ದಸ್ತಿ ಸದಸ್ಯರಾಗಿ ನೇಮಕ 

ಬೆಂಗಳೂರು, ಆಗಸ್ಟ್ 1 – ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ನೀಡಲಾಗುವ ಡಿ.ದೇವರಾಜ ಅರಸು ಪ್ರಶಸ್ತಿಗಾಗಿ 2025–26ನೇ ಸಾಲಿಗೆ ಅರ್ಹರನ್ನು ಶಿಫಾರಸು ಮಾಡಲು ಸರ್ಕಾರ ಆಯ್ಕೆ ಸಮಿತಿಯನ್ನು ರಚಿಸಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಸಲ್ಲಿಸಿದ ಪ್ರಸ್ತಾವನೆಯಂತೆ, 2025ರ ಆಗಸ್ಟ್ 20ರಂದು ಡಿ. ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆಯು ಆಚರಿಸಲ್ಪಡಲಿದ್ದು, ಅವರ ಜನ್ಮದಿನದ ಅಂಗವಾಗಿ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿರುವ ವ್ಯಕ್ತಿ/ಸಂಘ/ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗುವುದು.

ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರನ್ನು ಆಯ್ಕೆ ಮಾಡಲು ಕಲ್ಯಾಣ ಕರ್ನಾಟಕ ಹೋರಾಟಗಾರ ಲಕ್ಷ್ಮಣ್ ದಸ್ತಿ ಅವರನ್ನು ಸದಸ್ಯರನ್ನಾಗಿ ಒಳಗೊಂಡಿರುವ ಸಮಿತಿಯನ್ನು ರಚಿಸಲಾಗಿದೆ.

ಈ ಬಗ್ಗೆ ಸರಕಾರದ ಅಧೀನ ಕಾರ್ಯದರ್ಶಿ ಶ್ರೀ ಉಮಾದೇವಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

Files